ಶಿವಮೊಗ್ಗ ಸೇರಿ ನಾಲ್ಕು ಜಿಲ್ಲೆಯ ಸಚಿವರು, ಅಧಿಕಾರಿಗಳ ಜೊತೆ ಸಿಎಂ ವಿಡಿಯೋ ಸಂವಾದ, ಮಹತ್ವದ ನಿರ್ಧಾರ ಸಾದ್ಯತೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MAY 2021

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಶಿವಮೊಗ್ಗ ಸೇರಿದಂತೆ ನಾಲ್ಕು ಜಿಲ್ಲೆಗಳ ಉಸ್ತುವಾರಿ ಸಚಿವರು, ಅಧಿಕಾರಿಗಳ ಜೊತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂಪ್ಪ  ಇವತ್ತು ಮಧ್ಯಾಹ್ನ ವಿಡಿಯೋ ಸಂವಾದ ನಡೆಸಲಿದ್ದಾರೆ.

ಗ್ರಾಮೀಣ ಭಾಗದಲ್ಲಿ ಕರೋನ ವ್ಯಾಪಕವಾಗಿ ಹರಡುತ್ತಿರುವ ಕುರಿತು ವಿಡಿಯೋ ಕಾನ್ಫರೆನ್ಸ್‍ನಲ್ಲಿ ಚರ್ಚೆ ಮಾಡಲಿದ್ದಾರೆ. ಗ್ರಾಮಾಂತರ ಪ್ರದೇಶದಲ್ಲಿ ಕರೋನ ಸ್ಥಿತಿಗತಿ, ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಸಿಎಂ ಚರ್ಚಿಸಲಿದ್ದಾರೆ.

Shivamogga Live Promotion

ಶಿವಮೊಗ್ಗ, ಮೈಸೂರು, ಬಳ್ಳಾರಿ, ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವರು, ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಲಿದ್ದಾರೆ.

ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ ಅವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸೂಚಿಸಲಾಗಿದೆ. ಸಭೆ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಹತ್ವದ ನಿರ್ಧಾರ ಪ್ರಕಟಿಸುವ ಸಾದ್ಯತೆ ಇದೆ.

ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment