ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಿಎಂ ಭೇಟಿ, ರನ್ ವೇ ಉದ್ದ, ಏರ್ ಪೋರ್ಟ್ ವೆಚ್ಚ ಮತ್ತಷ್ಟು ಹೆಚ್ಚಳ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119060214 954258745054036 6933822829653446782 o.jpg? nc cat=105& nc sid=110474& nc ohc=jztG790PCawAX8gAOuD& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಅಕ್ಟೋಬರ್ 2020

ಸೋಗಾನೆ ಯಲ್ಲಿ ನಡೆಯುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಮುಂದಿನ  ಡಿಸೆಂಬರ್ ಅಂತ್ಯದ ಒಳಗಾಗಿ ಪೂರ್ಣಗೊಳ್ಳಲಿದ್ದು 2022ರ ಜನವರಿ ಅಥವಾ ಫೆಬ್ರವರಿ ತಿಂಗಳಿನಿಂದ ವಿಮಾನ ಹಾರಾಟ ಆರಂಭವಾಗುವ ನಿರೀಕ್ಷೆ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

VIDEO REPORT

ಸೋಗಾನೆ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಆರಂಭದಲ್ಲಿ 2050 ಮೀಟರ್ ರನ್ ವೇ  ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿತ್ತು. ಆದರೆ ಏರ್ ಬಸ್ ಸೇರಿದಂತೆ ದೊಡ್ಡ ವಿಮಾನಗಳು ಇಳಿಯಲು ಅನುಕೂಲವಾಗುವಂತೆ ರನ್ ವೇ ಉದ್ದವನ್ನು 3200 ಮೀಟರಿಗೆ ಹೆಚ್ಚಿಸಲು ಈಗಾಗಲೇ ಅನುಮೋದನೆ ನೀಡಲಾಗಿದೆ. ಇದಕ್ಕೆ ಹೆಚ್ಚುವರಿಯಾಗಿ 75 ಕೋಟಿ ರೂಪಾಯಿಯನ್ನು ಮುಂದಿನ ಬಜೆಟ್‍ನಲ್ಲಿ ಮಂಜೂರು ಮಾಡಲಾಗುವುದು ಎಂದರು.

ಶಿವಮೊಗ್ಗ ವಿಮಾನ ನಿಲ್ದಾಣವನ್ನು ಕೇಂದ್ರ ಸರಕಾರದ ಉಡಾನ್ ಯೋಜನೆ ವ್ಯಾಪ್ತಿಯಲ್ಲಿ ಒಳಪಡಿಸುವ ಕುರಿತು ಈಗಾಗಲೇ ಕೇಂದ್ರ ಸಚಿವರಿಗೆ ಮನವಿ ಮಾಡಲಾಗಿದೆ. ಇದರಿಂದ ಜನಸಾಮಾನ್ಯರಿಗೂ ಸಹ ವಿಮಾನಯಾನ  ಕೈಗೊಳ್ಳಲು ಸಾಧ್ಯವಾಗಲಿದೆ ಎಂದು ಹೇಳಿದರು.

ವಿಮಾನ ನಿಲ್ದಾಣ ಕಾಮಗಾರಿಗೆ ಅಗತ್ಯವಿರುವ  ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದೆ.  ಭೂಸ್ವಾಧೀನ ಪ್ರಕ್ರಿಯೆಯಿಂದ ಭೂಮಿ ಕಳೆದುಕೊಂಡ ಪ್ರತಿಯೊಬ್ಬರಿಗೂ ಸಮರ್ಪಕವಾದ ಪರಿಹಾರವನ್ನು ಒದಗಿಸಲಾಗುವುದು ಎಂದರು.

ವಿಮಾನ ನಿಲ್ದಾಣ ಸ್ಥಾಪನೆಯಿಂದಾಗಿ ಶಿವಮೊಗ್ಗ ಹಾಗೂ ಸುತ್ತಮುತ್ತಲ ಜಿಲ್ಲೆಗಳಲ್ಲಿ ಅಭಿವೃದ್ಧಿಗೆ ವೇಗ ದೊರಕುವುದನ್ನು  ನಿರೀಕ್ಷಿಸಲಾಗಿದೆ. ಈ ಭಾಗದಲ್ಲಿ  ಹೆಚ್ಚಿನ ಕೈಗಾರಿಕೆಗಳನ್ನು ಆರಂಭಿಸಲು ಇದು ಪೂರಕವಾಗಲಿದೆ ಎಂದು ಹೇಳಿದರು.

ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಜಿಲ್ಲಾದಿಕಾರಿ ಶಿವಕುಮಾರ್, ಎಸ್ಪಿ ಶಾಂತರಾಜು ಮತ್ತಿತರರು ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 19, 2020

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment