ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 16 FEBRUARY 2021
ಬಿಪಿಎಲ್ ಕಾರ್ಡ್ ಕುರಿತು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಉಮೇಶ್ ಕತ್ತಿ ನೀಡಿದ್ದ ಹೇಳಿಕೆಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಿಗೆ ಬಿಪಿಎಲ್ ಕಾರ್ಡ್ ಹೊಂದಿರುವ ಶ್ರೀಮಂತರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಪಿಎಲ್ ಕಾರ್ಡ್ ಕುರಿತು ಹೆಚ್ಚು ಚರ್ಚೆಯ ಅಗತ್ಯವಿಲ್ಲ. 2017ರಲ್ಲಿ ಕೊಟ್ಟ ಸೂಚನೆಗಳೆ ಮುಂದುವರೆಯುತ್ತದೆ ಎಂದರು.
ಶ್ರೀಮಂತರಿಗೆ ಬಿಪಿಎಲ್ ಕಾರ್ಡ್ ತಪ್ಪಬೇಕು
ಶ್ರೀಮಂತರಿಗೆ ಅನಗತ್ಯವಾಗಿ ಬಿಪಿಎಲ್ ಕಾರ್ಡ್ ಸಿಗುವುದು ತಪ್ಪಬೇಕು. ಈ ಸಂಬಂಧ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಾನೂನು ಬಾಹಿರವಾಗಿ ಬಿಪಿಎಲ್ ಕಾರ್ಡ್ ಹೊಂದಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಬಿಪಿಎಲ್ ಕಾರ್ಡ್ನಿಂದ ಏನೆಲ್ಲ ಸವಲತ್ತು ಪಡೆದಿದ್ದಾರೋ ಅದರ ಹಣ ವಸೂಲಿಗೆ ಸೂಚನೆ ನಿಡಲಾಗಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಶ್ರೀಮಂತರು ತಾವೆ ಕಾರ್ಡ್ ಹಿಂತಿರುಗಿಸಬೇಕು ಎಂದರು.
ಬೈಕು, ಟಿವಿ, ಫ್ರಿಡ್ಜ್ ಸೇರಿದಂತೆ ಹಲವು ವಸ್ತುಗಳನ್ನು ಹೊಂದಿರುವವರು ಬಿಪಿಎಲ್ ಕಾರ್ಡ್ ಹೊಂದಲು ಅರ್ಹರಲ್ಲ ಎಂದು ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡಿದ್ದರು. ಇದಕ್ಕೆ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿತ್ತು. ಬಿಜೆಪಿ ಶಾಸಕರು, ಮುಖಂಡರು ಕೂಡ ಆಕ್ರೋಶಗೊಂಡಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422