ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 30 ಸೆಪ್ಟೆಂಬರ್ 2019
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇನ್ನೊಂದೆರಡು ವರ್ಷದಲ್ಲಿ ಶಿವಮೊಗ್ಗ ಜಿಲ್ಲೆಯ ಸಂಪೂರ್ಣ ಚಿತ್ರಣವನ್ನೆ ಬದಲಿಸುತ್ತೇವೆ. ಯಾವುದೆ ಕಾಮಗಾರಿಗಳು ಬಾಕಿ ಉಳಿದಿವೆ ಎಂದು ಯಾರು ಹೇಳುವಂತಿರಲ್ಲ ಅಂತಾ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಶಿವಮೊಗ್ಗದ ಡಿಎಆರ್ ಮೈದಾನದಲ್ಲಿ ನಡೆದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಎರಡು ವರ್ಷದಲ್ಲಿ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿ ಕೈಗೊಳ್ಳಲಾಗುತ್ತದೆ ಎಂದರು.
ಸಿಎಂ ಯಡಿಯೂರಪ್ಪ ಏನೆಲ್ಲ ಹೇಳಿದರು?
ಈ ಹಿಂದೆ ಉಪಮುಖ್ಯಮಂತ್ರಿ, ಮುಖ್ಯಮಂತ್ರಿ ಆಗಿದ್ದ ಸಂದರ್ಭ ವಿಮಾನ ನಿಲ್ದಾಣ ಮಾಡಬೇಕು ಎಂದುಕೊಂಡಿದ್ದೆವು. ಆದರೆ ಈವರೆಗು ಅದು ಆಗಿಲ್ಲ. ಮತ್ತೆ ನಮ್ಮ ಕೈಯಲ್ಲೆ ಆ ಕೆಲಸವಾಗುತ್ತಿದೆ. ಈಗಾಗಲೆ ಜಿಲ್ಲಾಧಿಕಾರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರಿಗೆ ಸೂಚಿಸಿದ್ದೇನೆ. 45 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಿದ್ದೇವೆ. ಇನ್ನೊಂದು ವಾರದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಆರಂಭವಾಗಲಿದೆ. ಒಂಭತ್ತು ತಿಂಗಳಲ್ಲಿ ವಿಮಾನ ಹಾರಾಟ ಆರಂಭವಾಗಲಿದೆ.
ಶಿವಮೊಗ್ಗ ನಗರಕ್ಕೆ ರಿಂಗ್ ರಸ್ತೆಯ ಅಗತ್ಯವಿದೆ. ಅದರ ಕಾಮಗಾರಿಗೆ ಟೆಂಡರ್ ಕರೆಯಲಾಗುತ್ತದೆ. ಗಾಂಧಿ ಪಾರ್ಕ್ ಸುಂದರಗೊಳಿಸಲು ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ.
ಭದ್ರಾವತಿಗೆ ರಾಪಿಡ್ ಆಕ್ಷನ್ ಪೊಲೀಸ್ ಫೋರ್ಸ್ ಮಂಜೂರು ಮಾಡಿಸಿದ್ದೇವೆ. ಶೀಘ್ರದಲ್ಲೆ ಗೃಹ ಸಚಿವರು ಭೇಟಿ ನೀಡಿ, ಅದರ ಕೆಲಸ ಅರಂಭವಾಗಲಿದೆ.
ಸ್ಮಾರ್ಟ್ ಸಿಟಿ ಕಾಮಗಾರಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಣಿವಣ್ಣನ್ ಅವರಿಗೆ ಸೂಚಿಸಿದ್ದೇನೆ. ಜೋಗ ಅಭಿವೃದ್ಧಿ ಪ್ರಾಧಿಕಾರಕ್ಕೆ ಹತ್ತು ಕೋಟಿ ರೂ. ಕೊಡಲಾಗುತ್ತದೆ.
ಕ್ವಾಲಿಟಿ ವರ್ಕ್ ಬೇಕು, ಇಲ್ಲವಾದರೆ..
ಶಿವಮೊಗ್ಗದಲ್ಲಿ ನಡೆಯಲಿರುವ ವಿವಿಧ ಕಾಮಗಾರಿಗಳಲ್ಲಿ ಗುಣಮಟ್ಟಕ್ಕೆ ಅದ್ಯತೆ ನೀಡಬೇಕು ಎಂದು ಗುತ್ತಿಗೆದಾರರಿಗೆ ಸಿಎಂ ಯಡಿಯೂರಪ್ಪ ಖಡಕ್ ಸೂಚನೆ ನೀಡದ್ದಾರೆ. ಕಾಮಗಾರಿಗಳಲ್ಲಿ ಗುಣಮಟ್ಟವಿರಬೇಕು. ಕಳಪೆ ಕಾಮಗಾರಿ ಮಾಡಿದರೆ ಕ್ಷಮಿಸುವುದಿಲ್ಲ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್, ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಮೇಯರ್ ಲತಾ ಗಣೇಶ್, ಉಪಮೇಯರ್ ಚನ್ನಬಸಪ್ಪ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಣಿವಣ್ಣನ್, ಜಿಲ್ಲಾಧಿಕಾರಿ ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಶಾಂತರಾಜು, ಜಿಲ್ಲಾ ಪಂಚಾಯಿತಿ ಸಿಇಒ ವೈಶಾಲಿ, ತಹಶೀಲ್ದಾರ್ ಗಿರೀಶ್ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]