ಶಿವಮೊಗ್ಗ: ಸದಾ ಶೈಕ್ಷಣಿಕ ಒತ್ತಡದಲ್ಲಿದ್ದ ವಿದ್ಯಾರ್ಥಿಗಳು (College students) ಸಂಚಾರಿ ಪೊಲೀಸರಾಗಿ ಬದಲಾಗಿದ್ದರು. ವಿವಿಧ ವೃತ್ತಗಳಿಗೆ ತೆರಳಿ ಸಂಚಾರ ನಿಯಂತ್ರಣಕ್ಕಾಗಿ ಪೊಲೀಸ್ ಸಿಬ್ಬಂದಿ ಜೊತೆ ಶ್ರಮಿಸಿದರು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ರಾಷ್ಟ್ರೀಯ ಶಿಕ್ಷಣ ಸಮಿತಿ, ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು, ಕಮಲಾ ನೆಹರು ಮಹಿಳಾ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ 37 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ – 2026 ಅಂಗವಾಗಿ ಸರಣಿ ಕಾನೂನು ಅರಿವು ಕಾರ್ಯಕ್ರಮ ಇಂತಹ ವಿಶೇಷ ಸನ್ನಿವೇಶಕ್ಕೆ ಸಾಕ್ಷಿಯಾಗಿತ್ತು.
ಎ.ಟಿ.ಎನ್.ಸಿ.ಸಿ ಹಾಗೂ ಕಮಲಾ ನೆಹರು ಕಾಲೇಜಿನ ಎನ್.ಸಿ.ಸಿ ಹಾಗೂ ರೇಂಜರ್ಸ್ ರೋವರ್ಸ್ ವಿದ್ಯಾರ್ಥಿಗಳು ಸಂಚಾರಿ ಪೊಲೀಸರಾಗಿ ಮಹಾವೀರ ವೃತ್ತದಲ್ಲಿ ನಿಂತು ಕೈ ಸಂಕೇತಗಳನ್ನು ತೋರಿಸುತ್ತ ಸಂಚಾರ ದಟ್ಟಣೆ ನಿಯಂತ್ರಿಸಿದರು. ಬಿತ್ತಿ ಪತ್ರಗಳನ್ನು ಪ್ರದರ್ಶಿಸಿ ವಾಹನ ಸವಾರರಲ್ಲಿ ಜಾಗೃತಿ ಮೂಡಿಸಿದರು. ಜೀಬ್ರಾ ಲೈನ್ ದಾಟಿದ ಸವಾರರಿಗೆ, ವೃತ್ತದಲ್ಲಿ ಸರಿಯಾಗಿ ನಿಲ್ಲುವ ಬಗೆ ವಿವರಿಸುತ್ತಾ, ಅವಸರವೇ ಅಪಘಾತಕ್ಕೆ ಕಾರಣವೆಂದು ತಿಳಿಹೇಳಿದರು.
“8ನೇ ತರಗತಿಯಲ್ಲಿ ಸ್ಕೌಟ್ಸ್ ಮೂಲಕ ಸಂಚಾರಿ ಪೊಲೀಸರೊಂದಿಗೆ ಕೆಲ ಸಮಯ ಕಾರ್ಯನಿರ್ವಹಿಸುವ ಅವಕಾಶ ದೊರಕಿತ್ತು. ಅದು ಸಂಚಾರಿ ನಿಯಮದ ಬಗ್ಗೆ ನಮ್ಮೊಳಗೆ ಜಾಗೃತಿ ಮೂಡಿಸಿತ್ತು. ಅಂತಹ ಸಂದರ್ಭವನ್ನು, ವಿದ್ಯಾರ್ಥಿಗಳ ಮೂಲಕ ಪುನರ್ ಪ್ರಯೋಗ ಮಾಡುವ ಕಾರ್ಯದಲ್ಲಿ ನಿರತರಾಗಿದ್ದೇವೆ.”
ಎಂ.ಎಸ್.ಸಂತೋಷ್
ನ್ಯಾಯಾಧೀಶರು
“ಸಂಚಾರಿ ಪೊಲೀಸರು ಬಿಸಿಲು ಮಳೆ ಲೆಕ್ಕಿಸದೆ ಜನರನ್ನು ಸುರಕ್ಷಿತವಾಗಿಡುವ ಕಾರ್ಯ ನಡೆಸುತ್ತಿದ್ದಾರೆ. ಕಾನೂನು ಉಲ್ಲಂಘನೆ ಎಂಬುದು ಯುವ ಸಮೂಹದಲ್ಲಿ, ಒಂದು ರೀತಿಯ ಆಕರ್ಷಣಿಯ ಮನೋಭಾವವಾಗಿ ಕಾಡುತ್ತಿದೆ. ರಸ್ತೆ ಸುರಕ್ಷತಾ ಕಾನೂನುಗಳನ್ನು ಅನುಸರಿಸುವುದು ಮೂಲಭೂತ ಕರ್ತವ್ಯವಾಗಬೇಕು. ಆಗ ಮಾತ್ರ ಬದುಕಿನಲ್ಲಿ ಬದಲಾವಣೆ ಸಾಧ್ಯ.”
ಎಸ್.ಎನ್.ನಾಗರಾಜ
ಕಾರ್ಯದರ್ಶಿ, ರಾಷ್ಟ್ರೀಯ ಶಿಕ್ಷಣ ಸಮಿತಿ
“ಶಿವಮೊಗ್ಗ ನಗರದಲ್ಲಿಯೇ 3 ಲಕ್ಷಕ್ಕೂ ಹೆಚ್ಚು ವಿವಿಧ ಬಗೆಯ ವಾಹನಗಳಿವೆ. ಇಂಟಲಿಜೆನ್ಸ್ ಟ್ರಾಫಿಕ್ ಕಂಟ್ರೋಲ್ ಸಿಸ್ಟಮ್ ಸಹಾಯದಿಂದ, ನಮ್ಮ ಕಂಟ್ರೋಲ್ ರೂಂ ಮೂಲಕವೇ ನಗರದಲ್ಲಿ ನಡೆಯುವ ಪ್ರತಿ ಸಂಚಾರಿ ಕಾನೂನು ಉಲ್ಲಂಘನೆಗಳ ಮೇಲೆ ತೀವ್ರ ನಿಗಾ ಇಟ್ಟಿದ್ದೇವೆ. ಮುಂದೆ ಐದು ಟ್ರಾಫಿಕ್ ನಿಯಮ ಉಲ್ಲಂಘನೆ ಪ್ರಕರಣ ದಾಖಲಾದಲ್ಲಿ, ಡಿಎಲ್ ರದ್ದು ಪಡಿಸುವಂತಹ ಕಾನೂನು ಅನುಷ್ಟಾನಗೊಳ್ಳಲಿದೆ.”
ದೇವರಾಜ್
ಇನ್ಸ್‌ಪೆಕ್ಟರ್, ಸಂಚಾರಿ ಪೊಲೀಸ್ ಠಾಣೆ
ಎ.ಟಿ.ಎನ್.ಸಿ ಕಾಲೇಜು ವಿಶೇಷ ಕರ್ತವ್ಯಾಧಿಕಾರಿ ಡಾ.ಆರ್.ಎಂ.ಜಗದೀಶ್ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ವಕೀಲರಾದ ಸಾದ್ವಿ ಕಾಮತ್, ಸಂಚಾರಿ ಪೊಲೀಸ್ ಠಾಣೆ ಸಿಬ್ಬಂದಿ ವಿ.ಎಚ್.ಮುನೇಶಪ್ಪ ಸಂಚಾರ ನಿಯಂತ್ರಣಕ್ಕಾಗಿ ಪೋಲಿಸರು ಬಳಸುವ ವಿವಿಧ ಕೈ ಸಂಕೇತಗಳ ಪ್ರಾತ್ಯಕ್ಷಿಕೆ ನೀಡಿದರು.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ