ಶಿವಮೊಗ್ಗ ಲೈವ್.ಕಾಂ | SHIMOGA NEWS | 6 MARCH 2021
ಒಳಚರಂಡಿ ಜೋಡಣೆ ಸಂಪರ್ಕಕ್ಕೆ ಪರವಾನಗಿ ಪಡೆಯದೆ ಗೃಹ, ವಾಣಿಜ್ಯ ಕಟ್ಟಡಗಳಿಗೆ ಸಂಪರ್ಕ ಕಲ್ಪಿಸಿಕೊಂಡಿದ್ದಲ್ಲಿ ತಕ್ಷಣವೇ ಸಕ್ರಮ ಮಾಡಿಕೊಳ್ಳಬೇಕು. ಕಾಲಮಿತಿಯೊಳಗೆ ಸಂಪರ್ಕ ಪಡೆಯದೆ ಇದ್ದಲ್ಲಿ ಮನೆಗಳಿಗೆ ನೀರು ಹಾಗೂ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತದೆ ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ಕಮಿಷನರ್ ಚಿದಾನಂದ ವಟಾರೆ ಎಚ್ಚರಿಸಿದ್ದಾರೆ.
ನಾಗರಿಕರು ಮಹಾನಗರ ಪಾಲಿಕೆಯ ಅನುಮತಿ ಪಡೆದು ಯುಜಿಡಿ ಸಂಪರ್ಕ ಹೊಂದಿ ಯೋಜನೆಯ ಲಾಭ ಪಡೆದುಕೊಳ್ಳಬೇಕು. ಪರಿವೀಕ್ಷಣೆಯ ಸಂದರ್ಭ ಅಕ್ರಮ ಎಂದು ತಿಳಿದು ಬಂದಲ್ಲಿ, ನಿಯಮಾನುಸಾರ ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಎಲ್ಲಾ ವಿಧದ ಗೃಹ, ವಾಣಿಜ್ಯ ಉದ್ದೇಶದ ಕಟ್ಟಡಗಳಿಗೆ ಒಳಚರಂಡಿ ಸಂಪರ್ಕವನ್ನು ಪಾಲಿಕೆಯಲ್ಲಿ ನೋಂದಾಯಿತ ಗುತ್ತಿಗೆದಾರರಿಂದ, ಪ್ಲಂಬಿಂಗ್ ಕೆಲಸಗಾರರಿಂದ ಒಳಚರಂಡಿ ಜೋಡಣೆ ಪಡೆಯುವ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಒದಗಿಸಬೇಕು ಮತ್ತು ಪಾಲಿಕೆಗೆ 300 ರೂ. ಸಂಪರ್ಕ ಜೋಡಣೆ ಶುಲ್ಕ ಪಾವತಿಸಿ ಪರವಾನಗಿ ಪಡೆಯಬೇಕು ಎಂದು ಕಮಿಷನರ್ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]