ಅಡಕೆ ಬೆಳೆಗಾರರು, ಶರಾವತಿ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ಸಮಿತಿ, 15 ದಿನ ಗಡುವು, ಯಾರೆಲ್ಲ ಇದ್ದಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 3 NOVEMBER 2022

SHIMOGA | ಮಲೆನಾಡು (malnad) ರೈತರ ಸಮಸ್ಯೆಗಳ ಅಧ್ಯಯನಕ್ಕೆ ರಾಜ್ಯ ಕಾಂಗ್ರೆಸ್ ವತಿಯಿಂದ ಸಮಿತಿ ರಚಿಸಲಾಗಿದೆ. ಶಿವಮೊಗ ಮಹಾನಗರ ಪಾಲಿಕೆ ಸದಸ್ಯ ಬಿ.ಎ.ರಮೇಶ್ ಹೆಗ್ಡೆ ಅವರ ನೇತೃತ್ವದಲ್ಲಿ 9 ಜನರ ಸಮಿತಿ ರಚಿಸಲಾಗಿದೆ.

Shimoga Nanjappa Hospital

ಅರಣ್ಯ ಹಕ್ಕು ಕಾಯ್ದೆ ಸಮರ್ಪಕ ಅನುಷ್ಠಾನ, ಶರಾವತಿ ಮುಳುಗಡೆ ಸಂತ್ರಸ್ಥರ ಭೂ ಹಕ್ಕಿನ ಸಮಸ್ಯೆ, ಬಗರ್ ಹುಕುಂ ಸಾಗುವಳಿದಾರರ ಸಮಸ್ಯೆ, ಅಡಕೆ ಬೆಳೆಗೆ ಸಂಬಂಧಿಸಿದ (malnad) ಸಮಸ್ಯೆಗಳ ಬಗ್ಗೆ ಕೂಲಂಕಷ ಅಧ್ಯಯನ ನಡೆಸಲು ಸಮಿತಿ ರಚಿಸಲಾಗಿದೆ.

ಸಮಿತಿಯು ಅಧ್ಯಯನ ಮಾಡಿ ಅವುಗಳಿಗ ಪರಿಹಾರ ಮತ್ತು ಸೂಕ್ತ ಸಲಹೆಗಳನ್ನು ಸೂಚಿಸಬೇಕು. 15 ದಿನಗಳಲ್ಲಿ ಸಮಗ್ರ ವರದಿ ಸಲ್ಲಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕಮಾರ್ ಅವರು ಸಮಿತಿ ರಚಿಸಿದ್ದಾರೆ.

ಯಾರೆಲ್ಲ ಇದ್ದಾರೆ ಸಮಿತಿಯಲ್ಲಿ? (malnad)

ಶಿವಮೊಗ್ಗದ ರಮೇಶ್ ಹೆಗ್ಡೆ ಅವರು ಸಂಯೋಜಕರು, ಉತ್ತರ ಕನ್ನಡದ ವಕೀಲ ರವೀಂದ್ರ ನಾಯಕ್, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ತೀ.ನಾ.ಶ್ರೀನಿವಾಸ್, ಮೂಡಿಗೆರೆಯ ಬಿ.ಎಸ್.ಜಯರಾಮ್, ಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಜಯಂತ್, ಶಿವಮೊಗ್ಗದ ವಕೀಲ ಎನ್.ಪಿ.ಧರ್ಮರಾಜ್, ಕೊಡಗು ವಿರಾಜಪೇಟೆಯ ರಾಮು, ಬಾಳೆಮನೆಯ ಹೆಚ್.ಎಂ.ನಟರಾಜ್, ಕಿಶೋರ್ ಹೆಗಡೆ ಅವರನ್ನು ಒಳಗೊಂಡ ಸಮಿತಿ ರಚಿಸಲಾಗಿದೆ.

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ಕಾಗೋಡು ತಿಮ್ಮಪ್ಪ ಕಡೆಗಣನೆ, ಕಾಂಗ್ರೆಸ್ ಮುಖಂಡರ ಆಕ್ರೋಶ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment