ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಊರುಗಡೂರಿನಲ್ಲಿ ಹತ್ಯೆಯಾದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾಂಕೇತ್ ಕುಟುಂಬಕ್ಕೆ ಸೂಕ್ತ ನ್ಯಾಯ (compensation) ಒದಗಿಸಬೇಕು ಮತ್ತು ನಗರದಲ್ಲಿ ಹೆಚ್ಚುತ್ತಿರುವ ಮಾದಕ ವಸ್ತುಗಳ ಹಾವಳಿ ತಡೆಗಟ್ಟಿ, ಶಿವಮೊಗ್ಗವನ್ನು ಗಾಂಜಾ ಮುಕ್ತಗೊಳಿಸಬೇಕು ಎಂದು ಜಿಲ್ಲಾ ಸಂಗೊಳ್ಳಿ ರಾಯಣ್ಣ ಕುರುಬರ ವೇದಿಕೆ ಅಧ್ಯಕ್ಷ ರಾಮಕೃಷ್ಣ ಮೂಡ್ಲಿ ತಿಳಿಸಿದರು.
ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಮಕೃಷ್ಣ ಮೂಡ್ಲಿ, ಕ್ರಿಕೆಟ್ ಆಡುವಾಗ ನಡೆದ ಸಣ್ಣ ಗಲಾಟೆಯು ದ್ವೇಷಕ್ಕೆ ಕಾರಣವಾಗಿ ಈ ಕೊಲೆ ನಡೆದಿದೆ. ಶಾಲೆಯಲ್ಲಿ ರಾತ್ರಿ ವಿಶೇಷ ತರಗತಿ ಮುಗಿಸಿ ಮನೆಗೆ ಮರಳುತ್ತಿದ್ದ ಸಾಂಕೇತ್‌ನನ್ನು ಹತ್ಯೆ ಮಾಡಲಾಗಿದೆ. ಗಾಂಜಾ ನಶೆಯಲ್ಲಿಯೆ ಘಟನೆ ನಡೆರುವ ಶಂಕೆ ಇದೆ. ಆದ್ದರಿಂದ ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ನಗರದ ಶಾಲೆ-ಕಾಲೇಜುಗಳ ಬಳಿ ಗಾಂಜಾ ಮಾರಾಟ ಅವ್ಯಾಹತವಾಗಿ ನಡೆಯುತ್ತಿರುವುದು ಇಂತಹ ಅಪರಾಧಗಳಿಗೆ ಕಾರಣವಾಗಿವೆ. ಯುವಕರು ಮತ್ತು ವಿದ್ಯಾರ್ಥಿಗಳು ಗಾಂಜಾ ಮತ್ತು ಡ್ರಗ್ಸ್ ವ್ಯಸನಕ್ಕೆ ಬಲಿಯಾಗುತ್ತಿದ್ದು, ಪ್ರಜ್ಞೆ ತಪ್ಪಿ ಇಂತಹ ಕ್ರೂರ ಕೃತ್ಯಗಳಲ್ಲಿ ತೊಡಗುತ್ತಿದ್ದಾರೆ. ಗಾಂಜಾ ಮಾರಾಟ ಜಾಲದ ಮೂಲವನ್ನು ಪೊಲೀಸರು ಪತ್ತೆಹಚ್ಚಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ – ಶಿಕಾರಿಪುರದಲ್ಲಿ ಯಡಿಯೂರಪ್ಪ ಜನ್ಮದಿನ ಅದ್ಧೂರಿ ಆಚಾರಣೆ, ಸಾವಿರ ಸಾವಿರ ಜನ ಭಾಗಿ, ಯಾರೆಲ್ಲ ಏನೆಲ್ಲ ಹೇಳಿದರು?
ಸಾಂಕೇತ್ ಅವರದ್ದು ಬಡ ಕುಟುಂಬ. ಪೋಷಕರು ಒಬ್ಬನೇ ಮಗನನ್ನು ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಸರ್ಕಾರ ಘೋಷಿಸಿರುವ ₹15 ಲಕ್ಷ ಪರಿಹಾರ ಆ ಕುಟುಂಬದ ಭವಿಷ್ಯಕ್ಕೆ ಸಾಕಾಗುವುದಿಲ್ಲ. ಆದ್ದರಿಂದ ಸರ್ಕಾರವು ಕೂಡಲೇ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಮತ್ತು ಕುಟುಂಬದ ಹೆಣ್ಣುಮಗಳಿಗೆ ಸರ್ಕಾರಿ ಕೆಲಸ ನೀಡಿ ಆಸರೆಯಾಗಬೇಕು ಎಂದು ಒತ್ತಾಯಿಸಿದರು.
ಕುರುಬ ಸಮುದಾಯದಿಂದ ನೆರವು
ಕಾರ್ಯದರ್ಶಿ ಸಿ.ಹೆಚ್.ಮಾಲತೇಶ್ ಮಾತನಾಡಿ, ಕುರುಬ ಸಮುದಾಯದ 13 ವಿವಿಧ ಸಂಘಟನೆಗಳಿವೆ. ಎಲ್ಲರು ಒಗ್ಗೂಡಿ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷರ ನೇತೃತ್ವದಲ್ಲಿ ಸಂಕೇತ್ ಕುಟುಂಬಕ್ಕೆ ನೆರವಾಗಲಿದ್ದೇವೆ ಎಂದರು.

LATEST NEWS
- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

- ಸಚಿವ ಮಧು ಬಂಗಾರಪ್ಪ ಜನ್ಮದಿನ, ವಿದ್ಯಾರ್ಥಿಗಳು, ಪೌರ ಕಾರ್ಮಿಕರಿಗೆ ವಿಮಾನಯಾನ

- ವಾಸವಿ ಯುವಜನ ಸಂಘದ ಅಧ್ಯಕ್ಷರಾಗಿ ಶ್ರೀನಾಗ್, ಕನ್ನಿಕಾ ಸಖಿಯರ ಸಂಘದ ಅಧ್ಯಕ್ಷ ಶ್ವೇತಾ ಸಂದೀಪ್

About The Editor
ನಿತಿನ್ ಆರ್.ಕೈದೊಟ್ಲು





