ಶಿವಮೊಗ್ಗದಲ್ಲಿ KPSC ಪರೀಕ್ಷೆಯಲ್ಲಿ ನಕಲು ಮಾಡಲು ಮೊಬೈಲ್, ಸ್ಪೀಕರ್ ಬಳಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 10 ಜೂನ್ 2022

ಎಲೆಕ್ಟ್ರಾನಿಕ್ ಉಪಕರಣ ಬಳಸಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಆರೋಪ ಸಂಬಂಧ ಶಿವಮೊಗ್ಗದಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಹೈಕೋರ್ಟ್ ಆದೇಶದ ಮೇರೆಗೆ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಅವರು ನೀಡಿದ ದೂರಿನ ಹಿನ್ನೆಲೆ ಪ್ರಕರಣ ದಾಖಲು ಮಾಡಲಾಗಿದೆ.

Shimoga Nanjappa Hospital

ಕೆಪಿಎಸ್’ಸಿ ವತಿಯಿಂದ 2017ರ ಸೆಪ್ಟೆಂಬರ್ ತಿಂಗಳಲ್ಲಿ ಜಲ ಸಂಪನ್ಮೂಲ ಇಲಾಖೆಯ ಸಹಾಯಕ ಅಥವಾ ಕಿರಿಯ ಅಭಿಯಂತರರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿರುವ ಆರೋಪವಿದೆ. ಕೀರ್ತಿ ಮತ್ತು ಪ್ರಕಾಶ್ ಎಂಬುವವರ ವಿರುದ್ಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಏನಿದು ಪ್ರಕರಣ?

ಶಿವಮೊಗ್ಗದ ಬಿ.ಹೆಚ್.ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆ ವಿಭಾಗದಲ್ಲಿ ಪರೀಕ್ಷಾ ಕೇಂದ್ರ ಸ್ಥಾಪಿಸಲಾಗಿತ್ತು. ಇಲ್ಲಿ ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳಾದ ಕೀರ್ತಿ ಮತ್ತು ಪ್ರಕಾಶ್ ಎಂಬುವವರು ಬಟ್ಟೆಯ ಒಳಗೆ ಎಲೆಕ್ಟ್ರಾನಿಕ್ ಉಪಕರಣ ಇಟ್ಟುಕೊಂಡು ಹೋಗಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದ್ದರು ಎಂದು ಆರೋಪಿಸಲಾಗಿದೆ. ಈ ಸಂಬಂಧ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. univindia mgsu

ಹೈಕೋರ್ಟ್ ಆದೇಶ ಕೊಟ್ಟಿದ್ದೇಕೆ?

2017ರಲ್ಲಿ ದಾವಣಗೆರೆಯಲ್ಲಿ ಮೊರಾರ್ಜಿ ವಸತಿ ಶಾಲೆಗಳ ಸಹಶಿಕ್ಷಕರ ವಿವಿಧ ಹುದ್ದೆಗಳಿಗೆ ಕೆಪಿಎಸ್’ಸಿ ವತಿಯಿಂದ ಪರೀಕ್ಷೆ ನಡೆಸಲಾಯಿತು. ಈ ಸಂದರ್ಭ ತಿಪ್ಪೇಶ್ ನಾಯ್ಕ್ ಎಂಬಾತ ಎಲೆಕ್ಟ್ರಾನಿಕ್ ಉಪಕರಣ ಬಳಕೆ ಮಾಡಿಕೊಂಡು, ಪರೀಕ್ಷಾ ಅಕ್ರಮ ನಡೆಸಿರುವುದು ಬೆಳಕಿಗೆ ಬಂದಿತ್ತು. ಈತನ ವಿರುದ್ಧ ಪ್ರಕರಣ ದಾಖಲು ಮಾಡಲಾಗಿತ್ತು.

ವಿಚಾರಣೆ ವೇಳೆ ಕೀರ್ತಿ ಮತ್ತು ಪ್ರಕಾಶ್ ಎಂಬುವವರ ಅಕ್ರಮ ಎಸಗಿರುವುದು ಬೆಳಕಿಗೆ ಬಂದಿತ್ತು. ಅಲ್ಲದೆ ದಾವಣಗೆರೆಯಲ್ಲಿ ದಾಖಲಾಗಿದ್ದ ಪ್ರಕರಣದಿಂದ ತಮ್ಮನ್ನು ಖುಲಾಸೆಗೊಳಿಸುವಂತೆ ಆರೋಪಿಗಳು ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳ ವಿರುದ್ಧ ಪ್ರಕರಣ ದಾಖಲು ಮಾಡುವಂತೆ ಆದೇಶ ಹೊರಡಿಸಿತ್ತು.

ಹೇಗೆ ನಡೀತಿತ್ತು ಅಕ್ರಮ?

ಆರೋಪಿಗಳು ಪರೀಕ್ಷೆಯಲ್ಲಿ ಅಕ್ರಮ ಎಸಗಲು ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಕೆ ಮಾಡಿಕೊಳ್ಳುತ್ತಿದ್ದರು. ಮೊಬೈಲ್ ಫೋನ್ ಮದರ್ ಬೋರ್ಡ್, ಸ್ಪೀಕರ್ ಮತ್ತಿತರ ಉಪಕರಣಗಳನ್ನು ಬಳಕೆ ಮಾಡಿಕೊಂಡಿದ್ದರು. ಇದನ್ನು ಬಟ್ಟೆಯ ಒಳಗೆ ಇರಿಸಿಕೊಂಡು ಪರೀಕ್ಷೆಯಲ್ಲಿ ಅಕ್ರಮ ಎಸಗಿದ್ದರು. ಹೀಗೆ ಪರೀಕ್ಷೆ ಬರೆದವರ ಹೆಸರು ಪ್ರಾವಿಜನಲ್ ಆಯ್ಕೆ ಪಟ್ಟಿಯಲ್ಲಿತ್ತು.

ಹೈಕೋರ್ಟ್ ಆದೇಶದ ಮೇರೆಗೆ ಕರ್ನಾಟಕ ಲೋಕಸೇವಾ ಆಯೋಗವು ಶಿವಮೊಗ್ಗ ಪೊಲೀಸರಿಗೆ ದೂರು ನೀಡಿದೆ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು, ತನಿಖೆ ಮುಂದುವರೆದಿದೆ.

ಇದನ್ನೂ ಓದಿ – ಒಂದೇ ಒಂದು ಎಸ್ಎಂಎಸ್’ನಿಂದ 44 ಸಾವಿರ ಮಂಗಮಾಯ, ಹೇಗದು?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 10, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment