SHIVAMOGGA LIVE NEWS | 27 JANUARY 2024 ನೀವು ಸುದ್ದಿ ಓದುತ್ತಿರುವುದು ಶಿವಮೊಗ್ಗ ಲೈವ್.ಕಾಂ ವೆಬ್ಸೈಟ್ನಲ್ಲಿ. ಈ ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.
SHIMOGA : ಕೆಪಿಸಿಸಿ ವಕ್ತಾರ, ವಿಧಾನ ಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್ ಅವರ ವಿರುದ್ಧ ಕಾಂಗ್ರೆಸ್ ಮುಖಂಡರು ದೂರು ನೀಡಿದ್ದಾರೆ. ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರಿಗೆ ದೂರು ನೀಡಿದ್ದು, ಶಿಸ್ತು ಕ್ರಮಕ್ಕೆ ಒತ್ತಾಯಿಸಿದ್ದಾರೆ.
ದೂರಿನಲ್ಲಿ ಏನಿದೆ?
ಇತ್ತೀಚೆಗೆ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಕೊಂಡ ವಿಧಾನ ಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್ ಅವರು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಸಿ.ಯೋಗೀಶ್ ಅವರ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಹೆಚ್.ಸಿ.ಯೋಗೇಶ್ ಯಾರು ಎಂದು ಪ್ರಶ್ನಿಸಿದ್ದಾರೆ. ಆದ್ದರಿಂದ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ – ‘ಬಿಜೆಪಿಯಿಂದ ರಾಘವೇಂದ್ರಗೆ ಟಿಕೆಟ್, ಮತ್ತೆ ಆಯ್ಕೆ ಮಾಡಿ’, ಕಾಂಗ್ರೆಸ್ ಹಿರಿಯ ಶಾಸಕ ಬಹಿರಂಗ ಹೇಳಿಕೆ
