ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 5 ಜನವರಿ 2020
ಕೋಮು ದ್ವೇಷ ಮೂಡಿಸುವಂತಹ ಹೇಳಿಕೆ ನೀಡಿದ ಶಾಸಕ ಸೋಮಶೇಖರ ರೆಡ್ಡಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಮನವಿ ಮಾಡಿದೆ. ಈ ಸಂಬಂಧ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಅವರಿಗೆ ಮನವಿಯನ್ನು ಸಲ್ಲಿಸಿದೆ.
ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಮೊಹಮ್ಮದ್ ಆರೀಫ್ ಉಲ್ಲಾ ನೇತೃತ್ವದ ನಿಯೋಗ, ಜಿಲ್ಲಾ ರಕ್ಷಣಾಧಿಕಾರಿ ಶಾಂತರಾಜು ಅವರಿಗೆ ಮನವಿ ಸಲ್ಲಿಸಿತು. ಸಂವಿಧಾನಬದ್ಧವಾಗಿ ಜನಪ್ರತಿನಿಧಿಯಾಗಿರುವ ಸೋಮಶೇಖರ ರೆಡ್ಡಿ ಅವರು ಶಾಂತಿ ಭಂಗ ಉಂಟು ಮಾಡುವಂತಹ ಹೇಳಿಕೆ ನೀಡುತ್ತಿರುವುದು ಸರಿಯಲ್ಲ ಎಂದು ಆರೋಪಿಸಿದರು.
ಪ್ರಮುಖರಾದ ಮೊಹಮ್ಮದ್ ಹುಸೇನ್, ರಹಮತ್ತುಲ್ಲ, ಮೊಹಮ್ಮದ್ ನಿಹಾಲ್, ನಜೀರ್, ಮೊಹಮ್ಮದ್ ಷರೀಫ್ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422