SHIMOGA : ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಇರಿಸಿಕೊಂಡು, ಮತೀಯ ಭಾವನೆ ಕೆರಳಿಸುವಂತೆ ಫೇಸ್ಬುಕ್ನಲ್ಲಿಪೋಸ್ಟ್ ಪ್ರಕಟಿಸಲಾಗಿದೆ ಎಂದು ಆರೋಪಿಸಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎನ್‌ಎಸ್‌ಯುಐ ಸಂಘಟನೆ ವತಿಯಿಂದ ದೂರು ನೀಡಲಾಗಿದೆ.
ಮಾ.1ರಂದು ಶುಕ್ರವಾರ ಮಧ್ಯಾಹ್ನ ವಿಜ್ಞಾನ ವಿಷಯದ ಪರೀಕ್ಷೆಯನ್ನು ನಿಗದಿಪಡಿಸಲಾಗಿದೆ. ಈ ಕುರಿತು ಚಕ್ರವರ್ತಿ ಸೂಲಿಬೆಲೆ, ತಮ್ಮ ಫೇಸ್‌ಬುಕ್‌ನಲ್ಲಿ, ಮತೀಯ ಭಾವನೆ ಕೆರಳಿಸುವಂತೆ ಪೋಸ್ಟ್ ಪ್ರಕಟಿಸಿದ್ದಾರೆ. ಈ ಮೂಲಕ ಸಮಾಜದಲ್ಲಿ ಅಶಾಂತಿಗೆ ಕಾರಣವಾಗುತ್ತಿದ್ದಾರೆ. ಈ ಹಿನ್ನೆಲೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಯನಗರ ಪೊಲೀಸ್ ಠಾಣೆಯಲ್ಲಿ ಇನ್ಸ್‌ಪೆಕ್ಟರ್‌ಗೆ ದೂರು ಸಲ್ಲಿಸಿದ್ದಾರೆ.
ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ವಿಜಯ ಕುಮಾರ್, ಕಾರ್ಯಾಧ್ಯಕ್ಷ ರವಿ ಕುಮಾರ್, ಚರಣ, ಹರ್ಷಿತ್, ಪ್ರಮುಖರಾದ ಚೇತನ್, ಜಿ.ಡಿ.ಮಂಜುನಾಥ್ ಸೇರಿದಂತೆ ಹಲವರು ಇದ್ದರು.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ