ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 2 JANUARY 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗದಲ್ಲಿ ಭೀಮಾ ಕೋರೆಗಾವ ವಿಜಯೋತ್ಸವ
SHIMOGA : ನಗರದ ದಲಿತ ಸಂಘರ್ಷ ಸಮಿತಿ ಕಚೇರಿಯಲ್ಲಿ ಭೀಮಾ ಕೋರೆಗಾವ ವಿಜಯೋತ್ಸವ ಕಾರ್ಯಕ್ರಮ ನಡೆಯಿತು. ಈ ವೇಳೆ ಡಿಎಸ್‌ಎಸ್ ಜಿಲ್ಲಾ ಪ್ರಧಾನ ಸಂಚಾಲಕ ಟಿ.ಹೆಚ್.ಹಾಲೇಶಪ್ಪ ಮಾತನಾಡಿ, ಶೌರ್ಯ, ಸ್ವಾಭಿಮಾನ, ಸತ್ಯಪಥದ ನಿಷ್ಠೆಯೇ ದಲಿತರ ಸಂಕೇತ. ಸ್ವಾಭಿಮಾನ ಇಲ್ಲದ ಹೋರಾಟಗಳಿಗೆ ಇತಹಾಸವಿಲ್ಲ. ದಲಿತರು ಸ್ವಾಭಿಮಾನದಿಂದ ಸಂವಿಧಾನದ ಹಕ್ಕುಗಳಿಗೆ ಹೋರಾಡಬೇಕು ಎಂದರು. ಪ್ರಮುಖರಾದ ಎಂ.ಆರ್.ಶಿವಕುಮಾರ್, ಎ.ಡಿ.ಆನಂದ್, ಹುಣಸೋಡು ಶೇಷಪ್ಪ, ಪರಮೇಶ್ ಸಂತೆಕಡೂರು, ಸೂಗೂರು ಪರಮೇಶ್ ಸೇರಿದಂತೆ ಹಲವರು ಇದ್ದರು.
ನಿವೃತ್ತ ನೌಕರರ ಸಂಘದ ಕೊಠಡಿಗಳು ಲೋಕಾರ್ಪಣೆ
SHIMOGA : ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘದ ನೂತನ ಕೊಠಡಿಗಳನ್ನು ಜ.5ರಂದು ಉದ್ಘಾಟಿಸಲಾಗುತ್ತಿದೆ. ಅಂದು ಬೆಳಗ್ಗೆ 11ಕ್ಕೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಡಿ.ಎಂ. ಚಂದ್ರಶೇಖರ್ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಎಸ್.ಎನ್. ಚನ್ನಬಸಪ್ಪ, ಜಿ.ಪಂ. ಮಾಜಿ ಸದಸ್ಯ ಕೆ.ಈ.ಕಾಂತೇಶ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಫೇಸ್‌ಬುಕ್‌ನಲ್ಲಿ ಅವಹೇಳನ, ದೂರು
SHIMOGA : ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ಕುರಿತು ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ್ದ ವ್ಯಕ್ತಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಸಿಇಎನ್ ಠಾಣೆಗೆ ದೂರು ನೀಡಿದ್ದಾರೆ. ಶಿವಮೊಗ್ಗ ದಕ್ಷಿಣ ಬ್ಲಾಕ್ ಅಧ್ಯಕ್ಷ ವಿನಯ್ ತಾಂದ್ಲೆ, ಯುವ ಕಾಂಗ್ರೆಸ್ ಮುಖಂಡ ಡಾ.ಶರತ್ ಮರಿಯಪ್ಪ, NSUI ರಾಜ್ಯ ಕಾರ್ಯದರ್ಶಿ ಬಾಲಾಜಿ.ಹೆಚ್.ಎಸ್, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ್ ಆಟೋಕ್, ಭರತ್, ದರ್ಶನ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಶಿವಮೊಗ್ಗದ ಸ್ಮಾರ್ಟ್ ಸಿಟಿ ಗಡಿಯಾರದಲ್ಲಿ ದಿಕ್ಕಿಗೊಂದು ಟೈಮ್