ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

ಶಿವಮೊಗ್ಗ ಲೈವ್.ಕಾಂ | SHIMOGA | 22 ಏಪ್ರಿಲ್ 2020
ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ವಿರುದ್ದ ಶಿವಮೊಗ್ಗದಲ್ಲೂ ದೂರು ನೀಡಲಾಗಿದೆ. ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ನೇತೃತ್ವದ ನಿಯೋಗ, ಇವತ್ತು ದೂರು ನೀಡಿದೆ.
ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವಿರುದ್ಧ ಅವಹೇಳನಕಾರಿ ಮಾತನಾಡಿರುವ ಹಿನ್ನೆಲೆ, ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಅವರನ್ನು ಬಂಧಿಸಬೇಕು. ದ್ವೇಷದ, ಪ್ರಚೋದನಕಾರಿ ನಿರೂಪಣೆ ವಿರುದ್ಧ ಎಫ್ಐಆರ್ ದಾಖಲು ಮಾಡಬೇಕು ಎಂದು ಕಾಂಗ್ರೆಸಿಗರು ಒತ್ತಾಯಿಸಿದ್ದಾರೆ. ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಕಚೇರಿಯಲ್ಲಿ ಮನವಿ ಸಲ್ಲಿಸಲಾಗಿದೆ.
ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳಾದ ಎಸ್.ಟಿ.ಚಂದ್ರಶೇಖರ್, ಡಿ.ಜೆ.ಜಗತ್, ಕುಮಾರಸ್ವಾಮಿ, ಪ್ರಭಾಕರ ಗೌಡ, ಎನ್.ಅಣ್ಣಪ್ಪ, ಸಾಮಾಜಿಕ ಜಾಲತಾಣ ವಿಭಾಗದ ಸೌಗಂಧಿಕ, ಸ್ಟೈಲ್ಲಾ ಮಾರ್ಟಿನ್, ಮಂಜುನಾಥಗೌಡ ಸೇರಿದಂತೆ ಹಲವರು ಈ ವೇಳೆ ಇದ್ದರು.


ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com


