ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 17 JANUARY 2025
ಶಿವಮೊಗ್ಗ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರ್ಎಸ್ಎಸ್ ಮತ್ತು ಬಿಜೆಪಿಯ ಅವಹೇಳನ ಮಾಡಿದ್ದಾರೆ. ಅಲ್ಲದೆ ದೇಶ ವಿರೋಧಿ ಹೇಳಿಕೆ ನೀಡಿದ್ದಾರೆ. ಆದ್ದರಿಂದ ರಾಹುಲ್ ಗಾಂಧಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಿಜೆಪಿ ಯುವ ಮೋರ್ಚಾದ ವತಿಯಿಂದ ಜಿಲ್ಲಾ ರಕ್ಷಣಾಧಿಕಾರಿಗೆ ದೂರು (Complaint) ಸಲ್ಲಿಸಿದರು.
ಜಿಲ್ಲಾ ರಕ್ಷಣಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಯುವ ಮೋರ್ಚಾ ಕಾರ್ಯಕರ್ತರು, ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ನೂತನ ಕಚೇರಿ ಉದ್ಘಾಟನೆ ಸಂದರ್ಭ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಆರ್ಎಸ್ಎಸ್ ಮತ್ತು ಬಿಜೆಪಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಭಾರತದ ವಿರುದ್ಧ ಹೋರಾಟದ ಹೇಳಿಕೆ ನೀಡಿದ್ದಾರೆ. ಬ್ರಿಟೀಷರಿಂದ ಸ್ಥಾಪನೆಯಾದ ಕಾಂಗ್ರೆಸ್ ಪಕ್ಷ ಈವರೆಗೂ ಪರಕೀಯರ ಪರವಾಗಿಯೇ ನಡೆದುಕೊಳ್ಳುತ್ತಿದೆ ಎಂದು ಯುವ ಮೊರ್ಚಾ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ದೇಶ ವಿರೋಧಿ ಹೇಳಿಕೆ ನೀಡಿದ ರಾಹುಲ್ ಗಾಂಧಿ ವಿರುದ್ಧ ಕಾನುನು ಕ್ರಮ ಕೈಗೊಳ್ಳಬೇಕು ಎಂದು ಯುವ ಮೋರ್ಚಾ ಕಾರ್ಯಕರ್ತರು ಆಗ್ರಹಿಸಿದರು. ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರಶಾಂತ್ ಕುಕ್ಕೆ, ಪ್ರಧಾನ ಕಾರ್ಯದರ್ಶಿಗಳಾದ ದರ್ಶನ್.ಆರ್.ವಿ, ಅರುಣ್ ಕುಗ್ವೆ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

ಇದನ್ನೂ ಓದಿ » ‘ಸಹನೆಗು ಮಿತಿ ಇದೆ’, ವಾರ್ನಿಂಗ್ ನೀಡಿದ ಶಾಸಕ, ಕಾಂಗ್ರೆಸ್ ಚಿಹ್ನೆ ಬದಲಿಗೆ ಕಾರಣ ತಿಳಿಸಿದ ಸಂಸದ
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





