ಡಿಸಿಸಿ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮದ ಅನುಮಾನ, ಡಿಸಿಗೆ ದೂರು

Published On : ನವೆಂಬರ್ 18, 2022

Published By : ನಿತಿನ್‌ ಆರ್‌.ಕೈದೊಟ್ಲು 

SHIVAMOGGA LIVE NEWS | 18 NOVEMBER 2022

SHIMOGA | ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕುರಿತು ಅನುಮಾನವಿದೆ. ಈ ಸಂಬಂಧ ತನಿಖೆ ನಡೆಸಬೇಕು ಎಂದು ಇಬ್ಬರು ಅಭ್ಯರ್ಥಿಗಳು ಜಿಲ್ಲಾಧಿಕಾರಿ ಮತ್ತು ಸಹಕಾರ ಸಂಘಗಳ ಲೆಕ್ಕ ಪರಿಶೋಧಕರಿಗೆ ಮನವಿ ಸಲ್ಲಿಸಿದ್ದಾರೆ. (dcc bank exam)

Shimoga Atiyas Motors

ಶಿಕಾರಿಪುರದ ಅಭ್ಯರ್ಥಿ ಆಕಾಶ್ ಮತ್ತು ಮಂಜುನಾಥ್ ಅವರು ಮನವಿ ಸಲ್ಲಿಸಿದ್ದಾರೆ. ಕಳೆದ ಭಾನುವಾರ ನಡೆದ ಸಿಬ್ಬಂದಿ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕುರಿತು ಇಬ್ಬರು ಅಭ್ಯರ್ಥಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ.

(dcc bank exam)

ಅನುಮಾನಕ್ಕೆ ಕಾರಣವೇನು?

ಸರ್ಕಾರದ ಯಾವುದೆ ನೇಮಕಾತಿ ಪರೀಕ್ಷೆಯಲ್ಲಿ ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆಗಳನ್ನು ಹಿಂತಿರುಗಿಸಲಾಗುತ್ತದೆ. ಆದರೆ ಡಿಸಿಸಿ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆಯನ್ನು ಅಭ್ಯರ್ಥಿಗಳಿಗೆ ಕೊಟ್ಟಿಲ್ಲ. ಬದಲಾಗಿ ಅದನ್ನು ಹಿಂಪಡೆಯಲಾಗಿದೆ. ಪ್ರಶ್ನೆ ಪತ್ರಿಕೆ ಹಿಂಪಡೆಯುವ ಕುರಿತು ನೇಮಕಾತಿ ಪ್ರಕಟಣೆ ಅಥವಾ ಪ್ರವೇಶ ಪತ್ರದಲ್ಲಿ ತಿಳಿಸಿಲ್ಲ ಎಂದು ಆರೋಪಿಸಿದ್ದಾರೆ.

ಕ್ಲಿಕ್ ಮಾಡಿ ಇದನ್ನೂ ಓದಿ ಕೊನೆ ಕ್ಷಣದಲ್ಲಿ ಶಾಕ್ ನೀಡಿದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ

ಒಂದು ವೇಳೆ ಪರೀಕ್ಷೆಯ ಕೀ ಆನ್ಸರ್ ಬಿಡುಗಡೆ ಮಾಡಿದರೆ ಅಭ್ಯರ್ಥಿಯು ಯಾವ ಪ್ರಶ್ನೆಗೆ ಯಾವ ಉತ್ತರ ನೀಡಿದ್ದೇನೆ ಅನ್ನುವುದು ಸ್ಪಷ್ಟವಾಗಿ ಗೊತ್ತಾಗುವುದಿಲ್ಲ. ಪ್ರಶ್ನೆ ಪತ್ರಿಕೆ ಹಿಂಪಡದಿರುವುದನ್ನು ಗಮನಿಸಿದರೆ ಅಕ್ರಮ ನಡೆದಿರುವ ಕುರಿತು ಅನುಮಾನ ವ್ಯಕ್ತವಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಅನುಮಾನವಿದೆ. ಈ ಕುರಿತು ತನಿಖೆ ನಡೆಸುವ ಅಗ್ಯವಿದೆ ಎಂದು ಜಿಲ್ಲಾಧಿಕಾರಿ ಅವರಿಗೆ ಸಲ್ಲಿರುವ ಮನವಿಯಲ್ಲಿ ತಿಳಿಸಿದ್ದಾರೆ.

Shimoga Nanjappa HOspital

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ನವೆಂಬರ್ 18, 2022

Leave a Comment