SHIVAMOGGA LIVE NEWS | COMPLAINT | 1 ಜೂನ್ 2022
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯರೊಬ್ಬರು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ದೆಹಲಿಯಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಅಲ್ಲದೆ ಈಶ್ವರಪ್ಪ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯ ಸಭಾ ಸದಸ್ಯ ಸಂಜಯ್ ಸಿಂಗ್ ಅವರು ದೆಹಲಿಯ ನಾರ್ಥ್ ಅವೆನ್ಯೂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ದೂರು ನೀಡಲು ಕಾರಣವೇನು?
ಈಚೆಗೆ ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು, ರಾಷ್ಟ್ರಧ್ವಜಕ್ಕೆ ಅಗೌರವ ಆಗುವಂತಹ ಹೇಳಿಕೆ ನೀಡಿದ್ದಾರೆ ಎಂದು ಸಂಜಯ್ ಸಿಂಗ್ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು, ‘ಭಗವಧ್ವಜಕ್ಕೆ ಸಾವಿರಾರು ವರ್ಷದ ಇತಿಹಾಸವಿದೆ. ಇದು ತ್ಯಾಗದ ಸಂಕೇತ. ಇದೆ ಕಾರಣಕ್ಕೆ ಆರ್.ಎಸ್.ಎಸ್. ಶಾಖೆಯಲ್ಲಿ ಪ್ರತಿನಿತ್ಯ ನಾವು ಭಗವಧ್ವಜ ಇಟ್ಟು ಪ್ರಾರ್ಥನೆ ಮಾಡುತ್ತೇವೆ. ಇವತ್ತೋ, ನಾಳೆಯೋ ಯಾವುದೋ ಒಂದು ಕಾಲದಲ್ಲಿ ಈ ರಾಷ್ಟ್ರದಲ್ಲಿ ಭಗವಧ್ವಜ ರಾಷ್ಟ್ರಧ್ವಜ ಆಗಬಹುದು’ ಎಂದು ಹೇಳಿಕೆ ನೀಡಿದ್ದರು.
ಈ ಹೇಳಿಕೆ ವಿರುದ್ಧ ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಇದನ್ನೂ ಓದಿ – ಹಿಂದೂ ಹರ್ಷ ಹತ್ಯೆ ಕೇಸ್, 10ನೇ ಆರೋಪಿಯ ಜಾಮೀನು ಅರ್ಜಿ ವಜಾ, ಕಾರಣವೇನು?
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.