ಸಹ್ಯಾದ್ರಿ ಕಾಲೇಜು ಕಾಂಪೌಂಡ್ ಧ್ವಂಸ, ಗಂಧದ ಮರಗಳು ಕಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 NOVEMBER 2022

SHIMOGA | ದೀಪಾವಳಿ ಹಬ್ಬದ ಸಾಲು ರಜೆಯ ಸಂದರ್ಭ ಸಹ್ಯಾದ್ರಿ ಕಾಲೇಜಿನ ಕಾಂಪೌಂಡ್ (sahyadri college compound) ಕೆಡವಲಾಗಿದೆ. ಸುಮಾರು 20 ಗಂಧದ ಮರಗಳನ್ನು ಕಡಿದು ಹಾಕಲಾಗಿದೆ. ಈ ಸಂಬಂಧ ಪ್ರಾಂಶುಪಾಲರು ಕೋಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Shimoga Nanjappa Hospital

ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳ ಹಾಸ್ಟೆಲ್ ಹಿಂಭಾಗದ ಕಾಂಪೌಂಡ್ (sahyadri college compound) ಧ್ವಂಸ ಮಾಡಲಾಗಿದೆ. ಖಾಸಗಿ ಲೇಔಟ್ ಗೆ ರಸ್ತೆ ನಿರ್ಮಿಸಿಕೊಳ್ಳಲು ಈ ಕೆಲಸ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

(sahyadri college compound)

ದೀಪಾವಳಿ ಹಬ್ಬದ ವೇಳೆ ಕೃತ್ಯ

ದೀಪಾವಳಿ ಹಬ್ಬಕ್ಕೆ ಸಾಲು ರಜೆ ಇತ್ತು. ಕಾಲೇಜಿನಲ್ಲಿ ಸಿಬ್ಬಂದಿ, ವಿದ್ಯಾರ್ಥಿಗಳು ಇರಲಿಲ್ಲ. ಈ ಸಂದರ್ಭ ಹಾಸ್ಟೆಲ್ ಹಿಂಭಾಗದ ಕಾಂಪೌಂಡ್ ಕೆಡವಲಾಗಿದೆ. ಕಾಂಪೌಂಡ್ ಧ್ವಂಸಗೊಳಿಸಿದ್ದು, ಅದರ ಅವಶೇಷಗಳು ಅಲ್ಲಿಯೆ ಇದೆ. ಹಬ್ಬದ ಬಳಿಕ ಕಾಲೇಜು ಪುನಾರಂಭವಾದಾಗ ಘಟನೆ ಬೆಳಕಿಗೆ ಬಂದಿದೆ.

ಕುವೆಂಪು ವಿವಿಗೆ ಮಾಹಿತಿ

ಕಾಂಪೌಂಡ್ ಕೆಡವಿರುವ ವಿಚಾರ ತಿಳಿಯುತ್ತಿದ್ದಂತೆ ಸಹ್ಯಾದ್ರಿ ಕಾಲೇಜು ಆಡಳಿತ ಮಂಡಳಿ ಕುವೆಂಪು ವಿಶ್ವವಿದ್ಯಾಲಯಕ್ಕೆ ಮಾಹಿತಿ ನೀಡಿದ್ದರು. ಕುಲಸಚಿವೆ ಜಿ.ಅನುರಾಧ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾಂಪೌಂಡ್ ಧ್ವಂಸಗೊಳಿಸಿ, ಗಂಧದ ಮರಗಳನ್ನು ಕೂಡ ಕಡಿದು ಹಾಕಲಾಗಿದೆ ಎಂಬುದು ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸುವಂತೆ ಕುಲಸಚಿವೆ ಜಿ.ಅನುರಾಧ ಅವರು ಸೂಚನೆ ನೀಡಿದ್ದರು.

sahyadri college shimoga

ಪೊಲೀಸ್, ಅರಣ್ಯಾಧಿಕಾರಿಗಳ ಪರಿಶೀಲನೆ

ಕಾಂಪೌಂಡ್ ಧ್ವಂಸ ಮತ್ತು ಗಂಧದ ಮರಗಳನ್ನು ಕಡಿದಿರುವ ವಿಚಾರ ತಿಳಿಯುತ್ತಿದ್ದಂತೆ ಕೋಟೆ ಠಾಣೆ ಪೊಲೀಸರು ಮತ್ತು ಅರಣ್ಯಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು. ಅಗತ್ಯ ಮಾಹಿತಿ ಮತ್ತು ವಿಡಿಯೋ ದಾಖಲು ಮಾಡಿಕೊಂಡಿದ್ದಾರೆ.

(sahyadri college compound)

ಪ್ರಾಂಶುಪಾಲರು ಹೇಳಿದ್ದೇನು?

ಘಟನೆ ಕುರಿತು ಶಿವಮೊಗ್ಗ ಲೈವ್.ಕಾಂಗೆ ಪ್ರತಿಕ್ರಿಯೆ ನೀಡಿದ ಸಹ್ಯಾದ್ರಿ ಕಲಾ ಕಾಲೇಜು ಪ್ರಾಂಶುಪಾಲ ಡಾ. ಧನಂಜಯ ಅವರು, ‘ಸಹ್ಯಾದ್ರಿ ಕಾಲೇಜ ಕಾಂಪೌಂಡ್ ಒಡೆದಿದ್ದಾರೆ. ಎರಡು ಎಕರೆ ಪ್ರದೇಶಕ್ಕೆ ಅಕ್ರಮ ಪ್ರವೇಶ ಮಾಡಿದ್ದಾರೆ. ಗಂಧದ ಗಿಡ ತೆಗೆದಿದ್ದಾರೆ. ಇದನ್ನು ಗಮನಿಸಿದಾಗ ದುರುದ್ದೇಶ ಇರುವುದು ಗೊತ್ತಾಗುತ್ತದೆ. ಪಕ್ಕದ ಬಡಾವಣೆಗೆ ರಸ್ತೆ ನಿರ್ಮಾಣ ಮಾಡಿಕೊಂಡಿದ್ದಾರೆ.  ಈ ಸಂಬಂದ ಹಿರಿಯ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದೇವೆ. ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದೇವೆ’ ಎಂದರು.

sahyadri college shimoga

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದಲ್ಲಿ ಲಕ್ಷ ಲಕ್ಷ ಜನರಿಂದ ಕೋಟಿ ಕಂಠ ಗಾಯನ, ಎಲ್ಲೆಲ್ಲಿ ನಡೆಯಿತು ಕಾರ್ಯಕ್ರಮ?

ಕಾಲೇಜು ಎಸ್ಟೇಟ್ ಆಫೀಸರ್ ಡಾ. ಪ್ರಹ್ಲಾದ್ ಅವರು ಮಾತನಾಡಿ, ‘ಕಾಲೇಜು ಆಸ್ತಿಯನ್ನು ಕಬಳಿಸುವ ವ್ಯವಸ್ಥಿತ ಹುನ್ನಾರ ನಡೆಸಲಾಗಿದೆ. ದೀಪಾವಳಿ ಹಬ್ಬದ ಸಂದರ್ಭ ಕಾಲೇಜು ಮತ್ತು ಕುವೆಂಪು ವಿವಿ ಗಮನಕ್ಕೆ ತರದೆ ಜೆಸಿಬಿ ಬಳಸಿ ಹಾಸ್ಟೆಲ್ ಗೋಡೆ ಕೆಡವಿದ್ದಾರೆ. 20ಕ್ಕೂ ಹೆಚ್ಚು ಗಂಧದ ಮರಗಳನ್ನು ಕಡಿದು ಹಾಕಿದ್ದಾರೆ’ ಎಂದು ತಿಳಿಸಿದರು.

100 ಎಕರೆ ಜಾಗವಿತ್ತು

ಸಹ್ಯಾದ್ರಿ ಕಾಲೇಜಿಗಾಗಿ ವಿಶಾಲವಾದ ಜಾಗ ಮೀಸಲು ಇರಿಸಲಾಗಿದೆ. ಸುಮಾರು 100 ಎಕರೆ ಜಮೀನು ಕಾಲೇಜಿಗಾಗಿ ಮೀಸಲಾಗಿತ್ತು. ಆದರೆ ವಿವಿಧೆಡೆ ಒತ್ತುವರಿಯಾಗಿದ್ದು ಸುಮಾರು 79 ಎಕರೆ ಭೂಮಿ ಮಾತ್ರ ಉಳಿದುಕೊಂಡಿದೆ.

sahyadri college shimoga

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದಲ್ಲಿ ಆಟೋ ಪ್ರಯಾಣ ದರ ಹೆಚ್ಚಳಕ್ಕೆ ನಿರ್ಧಾರ, ಮೀಟರ್ ಬಳಕೆ ಕಡ್ಡಾಯಕ್ಕೆ ಗಡುವು ಫಿಕ್ಸ್

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 1, 2022

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment