ಶಿವಮೊಗ್ಗ: ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪಡಿತರ ಚೀಟಿ ಫಲಾನುಭವಿಗಳ ಮ್ಯಾಪಿಂಗ್ ಕಾರ್ಯವನ್ನು ತುರ್ತಾಗಿ ಪೂರ್ಣಗೊಳಿಸುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಆದೇಶಿಸಿದೆ. ➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಪಡಿತರ ಚೀಟಿಯಲ್ಲಿರುವ ಕುಟುಂಬದ ಎಲ್ಲಾ ಸದಸ್ಯರು ತಮ್ಮ ಜಾತಿ ಪ್ರಮಾಣ ಪತ್ರದೊಂದಿಗೆ ಆಯಾ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಕ್ಯಾಸ್ಟ್ ಮ್ಯಾಪಿಂಗ್ ಮಾಡಿಸಬೇಕು ಎಂದು ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯಾಯಬೆಲೆ ಅಂಗಡಿಗಳಲ್ಲಿ ಇಲಾಖೆಯು ಇದಕ್ಕೆ ಉಚಿತವಾಗಿ ಅವಕಾಶ ಕಲ್ಪಿಸಿದೆ. ಇದುವರೆಗೆ ಕ್ಯಾಸ್ಟ್ ಮ್ಯಾಪಿಂಗ್ ಮಾಡಿಸದೇ ಇರುವ ಎಸ್.ಸಿ, ಎಸ್.ಟಿ ಪಡಿತರ ಚೀಟಿದಾರರು ಹಾಗೂ ಅವರ ಕುಟುಂಬದ ಸದಸ್ಯರು ತಕ್ಷಣವೇ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ತಿಳಿಸಲಾಗಿದೆ.