ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಡಿಸೆಂಬರ್ 2021
ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರಿಗೆ ಶಿವಮೊಗ್ಗದಲ್ಲಿ ನಮನ ಸಲ್ಲಿಸಲಾಯಿತು. ಯುವ ಕಾಂಗ್ರೆಸ್ ವತಿಯಿಂದ ಶಿವಮೊಗ್ಗದ ಶಿವಪ್ಪನಾಯಕ ಪ್ರತಿಮೆ ಮುಂಭಾಗ ನಮನ ಸಲ್ಲಿಸಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮೇಣದ ಬತ್ತಿ ಹಿಡಿದು ಶ್ರದ್ಧಾಂಜಲಿ ಅರ್ಪಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು, ಮೌನಾಚರಣೆ ಮಾಡಿದರು. ಬಳಿಕ ಬಿಪಿನ್ ರಾವತ್ ಪವರವಾಗಿ ಘೋಷಣೆ ಕೂಗಿದರು.
ಸೂಡಾ ಮಾಜಿ ಅಧ್ಯಕ್ಷ ಎನ್.ರಮೇಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ್, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಪಿ.ಗಿರೀಶ್, ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ. ಲೋಕೇಶ್, ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಕುಮರೇಶ್, INTUC ಜಿಲ್ಲಾಧ್ಯಕ್ಷ ಅರ್ಜುನ್, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಪ್ರಧಾನ ಕಾರ್ಯದರ್ಶಿ ರಾಕೇಶ್, ಪ್ರಮುಖರಾದ ಇರ್ಫಾನ್, ಹಮೀದ್ ಶಂಕರ್, ವಿಶಾಲ್, ರಾಹುಲ್, ಶ್ರೀನಿವಾಸ್ ಸೇರಿದಂತೆ ಹಲವರು ಇದ್ದರು.