ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 ಆಗಸ್ಟ್ 2020
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಸಂತಾಪ ಸೂಚಿಸಿದ್ದಾರೆ. ಮತ್ತೊಂದೆಡೆ ಗೋಪಿ ಸರ್ಕಲ್ನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರಣಮ್ ಮುಖರ್ಜಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಸಂಸದ ರಾಘವೇಂದ್ರ ಶ್ರದ್ಧಾಂಜಲಿ
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನದಿಂದಾಗಿ ಶ್ರೇಷ್ಠ ನೇತಾರರನ್ನು ಕಳೆದುಕೊಂಡ ಅನಾಥಪ್ರಜ್ಞೆ ಉಂಟಾದಂತಾಗಿದೆ. ಅವರ ಕುಟುಂಬದವರಿಗೆ ನೋವು ನೀಗಿಸುವ ಶಕ್ತಿಯನ್ನು ದೇವರು ದಯಪಾಲಿಸಲಿ ಎಂದು ಸಂಸದ ರಾಘವೇಂದ್ರ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
ಯುವ ಕಾಂಗ್ರೆಸ್ ಸ್ಮರಣೆ
ಶಿವಮೊಗ್ಗ ಗೋಪಿ ಸರ್ಕಲ್ನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರಣಬ್ ಮುಖರ್ಜಿ ಅವರ ಶ್ರದ್ಧಾಂಜಲಿ ಸಭೆ ನಡೆಸಿದರು. ಪ್ರಣಬ್ ಮುಖರ್ಜಿ ಅವರ ಭಾವಚಿತ್ರದ ಮುಂದೆ ಕ್ಯಾಂಡಲ್ ಬೆಳಗಿ, ಮೌನಾಚರಣೆ ಮಾಡಿದರು. ಪಾಲಿಕೆ ವಿರೋಧ ಪಕ್ಷದ ನಾಯಕ ಹೆಚ್.ಸಿ.ಯೋಗೇಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಂಗನಾಥ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್, ಗಿರೀಶ್ ಸೇರಿದಂತೆ ಹಲವರು ಇದ್ದರು.
https://www.facebook.com/liveshivamogga/videos/314546413130946/?t=1
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು
















