ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 1 OCTOBER 2023
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
SHIMOGA : ಈದ್ ಮಿಲಾದ್ ಮೆರವಣಿಗೆ ಹಿನ್ನಲೆ ರಾಗಿಗುಡ್ಡದಲ್ಲಿ ಅಳವಡಿಸಿದ್ದ ಕಟೌಟ್ (Cut Out) ವಿಚಾರವಾಗಿ ಗೊಂದಲದ ಉಂಟಾಗಿತ್ತು. ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸಾರ್ವಜನಿಕರಿಗೆ ಮನವರಿಕೆ ಮಾಡಿ, ಪರಿಸ್ಥಿತಿ ತಿಳಿಗೊಳಿಸಿದರು.
ರಾಗಿಗುಡ್ಡ ಮುಖ್ಯರಸ್ತೆಯಲ್ಲಿ ಅಳವಡಿಸಿದ್ದ ಕಟೌಟ್ (Cut Out) ವಿಚಾರವಾಗಿ ಗೊಂದಲ ಸೃಷ್ಟಿಯಾಗಿ ಜನ ಗುಂಪುಗೂಡಿದ್ದರು. ನೂರಕ್ಕು ಹೆಚ್ಚು ಜನರು ಶಿವಮೊಗ್ಗ – ಹೊನ್ನಾಳಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಶಾಂತಗೊಳಿಸಿದರು.
ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?
ಸ್ಥಳಕ್ಕೆ ಭೇಟಿ ನೀಡಿದ್ದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಮುಖಂಡರ ಜೊತೆ ಚರ್ಚೆ ನಡೆಸಿ ಸಮಾಧಾನಪಡಿಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶಾಂತಿನಗರದಲ್ಲಿ ಟಿಪ್ಪು ಸುಲ್ತಾನ್ ಕಟೌಟ್ ವಿಚಾರವಾಗಿ ಗೊಂದಲವಿತ್ತು. ಸ್ವಲ್ಪ ವಿವಾದಾತ್ಮಕ ಇದ್ದುದರಿಂದ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದ್ದಾರೆ. ಅದಕ್ಕೆ ಗೊಂದಲ ಉಂಟಾಗಿ ಜನ ಸೇರಿದ್ದರು. ನಾನೇ ಸ್ಥಳಕ್ಕೆ ಬಂದು ಅವರ ಮುಖಂಡರ ಜೊತೆ ಮಾತಾಡಿದ್ದೇನೆ ಎಂದರು.
ಇದನ್ನೂ ಓದಿ – ಈದ್ ಮಿಲಾದ್ ಮೆರವಣಿಗೆ, ಶಿವಮೊಗ್ಗದಲ್ಲಿ ಅದ್ಧೂರಿ ಸಿದ್ಧತೆ, ಎಲ್ಲೆಲ್ಲಿ ಹೇಗಿದೆ ಅಲಂಕಾರ?
ಕೆಲವರಿಗೆ ಇಂತಹ ಕಟೌಟ್ ಹಾಕಬಾರದು ಎಂಬುದು ಗೊತ್ತಿರಲಿಲ್ಲ. ಅವರಿಗೆ ಈ ಬಗ್ಗೆ ಮನವರಿಕೆ ಮಾಡಲಾಗಿದೆ. ಅವರು ಕೂಡ ಒಪ್ಪಿಕೊಂಡಿದ್ದಾರೆ. ಸದ್ಯ ಯಾವುದೇ ಸಮಸ್ಯೆ ಇಲ್ಲ. ಪರಿಸ್ಥಿತಿ ಶಾಂತವಾಗಿದೆ ಎಂದು ತಿಳಿಸಿದರು.
ಸಾರ್ವಜನಿಕರು ಯಾವುದೇ ವಂದತಿಗೆ ಕಿವಿಕೊಡಬಾರದು. ಈದ್ ಮಿಲಾದ್ ಹಬ್ಬದ ಮೆರವಣಿಗೆ ಹಿನ್ನೆಲೆ ಎಲ್ಲಾ ತಯಾರಿ ಮಾಡಿಕೊಂಡಿದ್ದೇವೆ. 15 ದಿನದಿಂದ ನಗರದಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದೆ. 2 ಆರ್ಎಎಫ್ ಕಂಪನಿ, 5 ಕೆಎಸ್ಆರ್ಪಿ ತುಕಡಿ, 12 ಡಿಎಆರ್ ತುಕಡಿ, 2500 ಪೊಲೀಸರು ಬಂದೋಬಸ್ತ್ಗೆ ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.