ರಾಗಿಗುಡ್ಡದಲ್ಲಿ ಕಟೌಟ್‌ ವಿಚಾರವಾಗಿ ಗೊಂದಲ, ಸ್ಥಳಕ್ಕೆ ಎಸ್‌ಪಿ ಭೇಟಿ, ಪರಿಸ್ಥಿತಿ ಶಾಂತ, ಏನೇನಾಯ್ತು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 OCTOBER 2023

SHIMOGA : ಈದ್‌ ಮಿಲಾದ್‌ ಮೆರವಣಿಗೆ ಹಿನ್ನಲೆ ರಾಗಿಗುಡ್ಡದಲ್ಲಿ ಅಳವಡಿಸಿದ್ದ ಕಟೌಟ್‌ (Cut Out) ವಿಚಾರವಾಗಿ ಗೊಂದಲದ ಉಂಟಾಗಿತ್ತು. ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸಾರ್ವಜನಿಕರಿಗೆ ಮನವರಿಕೆ ಮಾಡಿ, ಪರಿಸ್ಥಿತಿ ತಿಳಿಗೊಳಿಸಿದರು.

ರಾಗಿಗುಡ್ಡ ಮುಖ್ಯರಸ್ತೆಯಲ್ಲಿ ಅಳವಡಿಸಿದ್ದ ಕಟೌಟ್‌ (Cut Out)  ವಿಚಾರವಾಗಿ ಗೊಂದಲ ಸೃಷ್ಟಿಯಾಗಿ ಜನ ಗುಂಪುಗೂಡಿದ್ದರು. ನೂರಕ್ಕು ಹೆಚ್ಚು ಜನರು ಶಿವಮೊಗ್ಗ – ಹೊನ್ನಾಳಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಶಾಂತಗೊಳಿಸಿದರು.

ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?

ಸ್ಥಳಕ್ಕೆ ಭೇಟಿ ನೀಡಿದ್ದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಮುಖಂಡರ ಜೊತೆ ಚರ್ಚೆ ನಡೆಸಿ ಸಮಾಧಾನಪಡಿಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶಾಂತಿನಗರದಲ್ಲಿ ಟಿಪ್ಪು ಸುಲ್ತಾನ್ ಕಟೌಟ್ ವಿಚಾರವಾಗಿ ಗೊಂದಲವಿತ್ತು. ಸ್ವಲ್ಪ ವಿವಾದಾತ್ಮಕ ಇದ್ದುದರಿಂದ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದ್ದಾರೆ. ಅದಕ್ಕೆ ಗೊಂದಲ ಉಂಟಾಗಿ ಜನ ಸೇರಿದ್ದರು. ನಾನೇ ಸ್ಥಳಕ್ಕೆ ಬಂದು ಅವರ ಮುಖಂಡರ ಜೊತೆ ಮಾತಾಡಿದ್ದೇನೆ ಎಂದರು.

ಇದನ್ನೂ ಓದಿ – ಈದ್‌ ಮಿಲಾದ್‌ ಮೆರವಣಿಗೆ, ಶಿವಮೊಗ್ಗದಲ್ಲಿ ಅದ್ಧೂರಿ ಸಿದ್ಧತೆ, ಎಲ್ಲೆಲ್ಲಿ ಹೇಗಿದೆ ಅಲಂಕಾರ?

ಕೆಲವರಿಗೆ ಇಂತಹ ಕಟೌಟ್‌ ಹಾಕಬಾರದು ಎಂಬುದು ಗೊತ್ತಿರಲಿಲ್ಲ. ಅವರಿಗೆ ಈ ಬಗ್ಗೆ ಮನವರಿಕೆ ಮಾಡಲಾಗಿದೆ. ಅವರು ಕೂಡ ಒಪ್ಪಿಕೊಂಡಿದ್ದಾರೆ. ಸದ್ಯ ಯಾವುದೇ ಸಮಸ್ಯೆ ಇಲ್ಲ. ಪರಿಸ್ಥಿತಿ ಶಾಂತವಾಗಿದೆ ಎಂದು ತಿಳಿಸಿದರು.

ಸಾರ್ವಜನಿಕರು ಯಾವುದೇ ವಂದತಿಗೆ ಕಿವಿಕೊಡಬಾರದು. ಈದ್ ಮಿಲಾದ್‌ ಹಬ್ಬದ ಮೆರವಣಿಗೆ ಹಿನ್ನೆಲೆ ಎಲ್ಲಾ ತಯಾರಿ ಮಾಡಿಕೊಂಡಿದ್ದೇವೆ. 15 ದಿನದಿಂದ ನಗರದಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದೆ. 2 ಆರ್‌ಎಎಫ್‌ ಕಂಪನಿ, 5 ಕೆಎಸ್ಆರ್‌ಪಿ ತುಕಡಿ, 12 ಡಿಎಆರ್ ತುಕಡಿ, 2500 ಪೊಲೀಸರು ಬಂದೋಬಸ್ತ್‌ಗೆ ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 1, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment