‘ಸಚಿವ ಈಶ್ವರಪ್ಪ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಿ, ಬಂಧಿಸಬೇಕು’

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 17 ಫೆಬ್ರವರಿ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ ಕೆ.ಎಸ್. ಈಶ್ವರಪ್ಪನವರನ್ನು ಸಂಪುಟದಿಂದ  ಕೈಬಿಡಬೇಕು, ಅವರ ವಿರುದ್ಧ ರಾಷ್ಟ್ರದ್ರೋಹದ ಪ್ರಕರಣ ದಾಖಲಿಸಿ ಕೂಡಲೇ ಬಂಧಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಆಗ್ರಹಿಸಿದರು.

Shimoga Nanjappa Hospital Cancer Care Center

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ವರ್ತನೆ ಹಾಗೂ ಪಕ್ಷದ  ಮುಖಂಡರ ಹೇಳಿಕೆ ದೇಶಕ್ಕೆ ಮಾರಕವಾಗಿದೆ. ಅಭಿವೃದ್ಧಿ ಕೆಲಸ ಹಾಗೂ ಜನರ ಸಮಸ್ಯೆಗಳನ್ನು ಬಗೆಹರಿಸದ ಬಿಜೆಪಿ ಪುಕ್ಕಟೆಯಾಗಿ ಚುನಾವಣೆ ಎದುರಿಸಿ ಅಧಿಕಾರಕ್ಕೆ ಬರಲು ಯತ್ನಿಸುತ್ತಿದೆ. ಬಿಜೆಪಿ ಜಾತಿ ವಿಷ ಬೀಜ ಭಿತ್ತಿ ದೇಶಾದ್ಯಂತ ಆಶಾಂತಿ ಉಂಟು ಮಾಡುತ್ತಿದೆ ಎಂದರು.

ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸದ ಬಿಜೆಪಿ ಸರ್ಕಾರ ಜನರ ತೆರಿಗೆ ಹಣವನ್ನು ಲೂಟಿ ಮಾಡಿ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದ ಅವರು, ಚುನಾವಣೆ ಬಂದಾಗ ಜನರಲ್ಲಿ ಭಯ ಭೀತಿ ಹುಟ್ಟಿಸಿ ಜಾತಿ ಮತ್ತು ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಪ್ರಯತ್ನ ಮಾಡಿ ಅಧಿಕಾರಕ್ಕೆ ಬರಲು ಯತ್ನಿಸುತ್ತದೆ.  ಸಚಿವ ಈಶ್ವರಪ್ಪ ಅವರು ರಾಜ್ಯದ ಹಾಗೂ ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಚಿಂತನೆ ನಡೆಸಲಿಲ್ಲ. ಜನರ ಭಾವನೆಯನ್ನು ಕೆರಳಿಸುವಂತಹ ಆರ್.ಎಸ್.ಎಸ್ ಓಲೈಸುವ ನಿಟ್ಟಿನಲ್ಲಿ ಇಂತಹ ಹೇಳಿಕೆ ನೀಡುವ ಮೂಲಕ ಅಗ್ಗದ ಪ್ರಚಾರಕ್ಕೆ ಇಳಿದಿದ್ದಾರೆ ಎಂದು ಟೀಕಿಸಿದರು.

ಬಿಜೆಪಿಯವರು ಸದಾ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಬ್ರಿಟಿಷರ ಆಡಳಿತಕ್ಕೂ, ಇವರ ಆಡಳಿತಕ್ಕೂ ಯಾವುದೇ ವ್ಯತ್ಯಾಸವಿಲ್ಲ. ಜನಸಾಮಾನ್ಯರಲ್ಲಿ ಕೋಮು ಭಾವನೆಯನ್ನು ಬಿತ್ತುವುದು, ಸಮಾಜದಲ್ಲಿನ ಶಾಂತಿ ಕದಡುವುದು ಇವರ ಪ್ರಮುಖ ಅಜೆಂಡಾವಾಗಿದೆ. ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ಹೋರಾಟ ಮಾಡುತ್ತಿದ್ದ ಸಂದರ್ಭದಲ್ಲಿ 700ಕ್ಕೂ ಅಧಿಕ ರೈತರು ಮೃತಪಟ್ಟಿದ್ದಾರೆ. ಅದರ ಬಗ್ಗೆ ಎಲ್ಲಿಯೂ ಪ್ರಧಾನಿಯವರು ಪ್ರಸ್ತಾಪಿಸುತ್ತಿಲ್ಲ ಎಂದು ಟೀಕಿಸಿದರು.

ಹಿಜಾಬ್ ಪ್ರಕರಣವನ್ನು ಮೊದಲು ಹುಟ್ಟು ಹಾಕಿದ್ದೇ ಶಾಸಕ ರಘುಪತಿ ಭಟ್. ವಿದ್ಯಾರ್ಥಿಗಳಲ್ಲೂ ಕೋಮು ಭಾವನೆ ಬಿತ್ತುವ ಕಾರ್ಯವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳಲ್ಲಿ ಇಂತಹ ಭಾವನೆ ಮೂಡಿಸಬಾರದು ಎಂದು ಸುಂದರೇಶ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕರಾದ ಕೆ.ಬಿ. ಪ್ರಸನ್ನಕುಮಾರ್, ಆರ್. ಪ್ರಸನ್ನಕುಮಾರ್, ಹೆಚ್.ಎಂ. ಚಂದ್ರಶೇಖರಪ್ಪ, ಮುಖಂಡರಾದ ಹೆಚ್.ಸಿ. ಯೋಗೀಶ್, ಯಮುನಾ ರಂಗೇಗೌಡ, ರೇಖಾ ರಂಗನಾಥ್, ಮಹೆಕ್ ಷರೀಫ್, ಡಾ.ಶ್ರೀನಿವಾಸ್, ಕಲಗೋಡು ರತ್ನಾಕರ್, ದೀಪಕ್ ಸಿಂಗ್, ಪಲ್ಲವಿ, ನೇತಾಜಿ, ಸಿ.ಎಸ್.ಚಂದ್ರಭೂಪಾಲ್, ಎಸ್.ಟಿ.ಚಂದ್ರಶೇಖರ್ ಇನ್ನಿತರರು ಉಪಸ್ಥಿತರಿದ್ದರು.

ALSO READ – About Shivamogga Live

Shimoga Live Total Reach Graphics

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment