SHIVAMOGGA LIVE NEWS | 18 JUNE 2024 (ಈ ಸುದ್ದಿಯನ್ನು ಇನ್ನು 52 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
SHIMOGA : ಪಶ್ಚಿಮ ಬಂಗಾಳದ ಡಾರ್ಜಲಿಂಗ್ ಜಿಲ್ಲೆಯಲ್ಲಿ ಸೋಮವಾರ ಸಂಭವಿಸಿದ ರೈಲು (Railway) ಅಪಘಾತದಲ್ಲಿ 9 ಮಂದಿ ಮೃತಪಟ್ಟಿದ್ದಾರೆ. 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಘಟನೆಯ ನೈತಿಕ ಹೊಣೆ ಹೊತ್ತು ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಶಿವಮೊಗ್ಗ ನಗರ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಲಾಯಿತು.
ದೇಶಕ್ಕೆ ಬುಲೆಟ್ ರೈಲು ಕೊಡುತ್ತೇವೆ ಎಂದು 2014ರಲ್ಲಿ ಭರವಸೆ ನೀಡಿ ಬಿಜೆಪಿ ಅಧಿಕಾರಕ್ಕೆ ಬಂತು. ಆದರೆ ಇರುವ ರೈಲಿಗೆ ಸಿಗ್ನಲ್ ಕೊಡಲು ಕಾರ್ಮಿಕರಿಲ್ಲದಂತಾಗಿದೆ. ಕೇಂದ್ರ ಸರ್ಕಾರ ರೈಲಿನ ಚೇರ್ ಮತ್ತು ಶೌಚಾಲಯದ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ತೋರಿಸಿ ಜನರಿಗೆ ಮೋಸ ಮಾಡುತ್ತಿದೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.
ದೇಶಾದ್ಯಂತ ಪದೇ ಪದೆ ರೈಲು ಅಪಘಾತಗಳು ಸಂಭವಿಸುತ್ತಿವೆ. ಇದರ ನೈತಿಕ ಹೊಣೆ ಹೊತ್ತು ರೈಲ್ವೆ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ.ಎಸ್.ಶಿವಕುಮಾರ್, ಪ್ರಮುಖರಾದ ಹೆಚ್.ಸಿ.ಯೋಗೇಶ್, ರಂಗೇಗೌಡ, ಹೆಚ್.ಎಸ್.ಬಾಲಾಜಿ, ನವೀನ್, ಅಕ್ಬರ್, ಗಿರೀಶ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಪೊಲೀಸರೆ ಮುಂದೆ ನಿಂತು ಕನ್ಸರ್ವೆನ್ಸಿ ಕ್ಲೀನ್ ಮಾಡಿಸಿದರು, ಯಾಕೆ?
