‘ಈಶ್ವರಪ್ಪ ರಾಜಕೀಯ ದಾಹಕ್ಕೆ ಶಿವಮೊಗ್ಗದಲ್ಲಿ ಇನ್ನೆಷ್ಟು ಹೆಣ ಬೀಳಬೇಕು’

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 2 NOVEMBER 2022

ಶಿವಮೊಗ್ಗ | ಈಶ್ವರಪ್ಪ ಅವರು ನಾಲಗೆ ಬಿಗಿ ಹಿಡಿದು ಮಾತನಾಡಬೇಕು. ಇವರ ರಾಜಕೀಯ ದಾಹಕ್ಕೆ ಇನ್ನೆಷ್ಟು ಹೆಣ ಬೀಳಬೇಕು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್‌.ಸುಂದರೇಶ್ ಪ್ರಶ್ನಿಸಿದರು. (angry over eshwarappa)

Shimoga Nanjappa Hospital

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಎಸ್.ಸುಂದರೇಶ್ ಅವರು, ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರಿಂದ ಕೋಮು ಗಲಭೆ ಆಗುತ್ತಿದೆ ಎಂದು ಈಶ್ವರಪ್ಪ ಆರೋಪಿಸಿದ್ದಾರೆ. ತಮ್ಮ ಹೇಳಿಕೆಗಳ ಮೂಲಕ ಈಶ್ವರಪ್ಪ ಅವರೆ ಯುವಕರನ್ನು ಪ್ರಚೋದಿಸುತ್ತಿದ್ದಾರೆ. ಇತಿಹಾಸದ ಅಧ್ಯಯನ ಇಲ್ಲದ ಯುವಕರು ಅವರು ಮಾತು ನಂಬುತ್ತಿದ್ದಾರೆ. ಶಿವಮೊಗ್ಗದಲ್ಲಿ ಪದೇ ಪದೆ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತಿದೆ. ಇದಕ್ಕೆ ಕಾರಣರಾರು ಎಂದು ಪ್ರಶ್ನಿಸಿದರು.

(angry over eshwarappa)

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮತ್ತೊಬ್ಬ ಗುತ್ತಿಗೆದಾರ ದಯಾ ಮರಣಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇದರ ಕುರಿತು ಈಶ್ವರಪ್ಪ ಅವರು ಮಾತಾಡುತ್ತಿಲ್ಲ ಎಂದು ಸಂದರೇಶ್ ಆಕ್ರೋಶ ವ್ಯಕ್ತಪಡಿಸಿದರು.

ಸಾವರ್ಕರ್ ಅವರ ಮೊಮ್ಮಗನನ್ನು ಕರೆ ತಂದು ಅವರನ್ನು ಸ್ವಾತಂತ್ರ್ಯ ಹೋರಾಟಗಾರ ಎಂದು ಬಿಂಬಿಸಲು ಈಶ್ವರಪ್ಪ ಯತ್ನಿಸಿದರು. ಆದರೆ ಇದು ಪ್ರಜ್ಞಾವಂತರ ಜಿಲ್ಲೆ. ಇಂತಹ ಪ್ರಯತ್ನಗಳು ಇಲ್ಲಿ ಸಫಲತೆ ಪಡೆಯುವುದಿಲ್ಲ ಎಂದು ಸುಂದರೇಶ್ ತಿಳಿಸಿದರು.

ಕೆಪಿಸಿಸಿ ಕಾರ್ಯದರ್ಶಿ ಸಯ್ಯದ್ ಅಹಮದ್, ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್, ಪ್ರಮುಖರಾದ ಚಂದ್ರಭೂಪಾಲ್ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ | ‘ಕಾಗೋಡು ತಿಮ್ಮಪ್ಪ ಸ್ಪರ್ಧೆಗೆ ಅವಕಾಶ ಕೊಡಬೇಕು, ಅವಿರೋಧ ಆಯ್ಕೆಗೆ ಸರ್ವ ಪಕ್ಷಗಳು ಮುಂದಾಗಬೇಕು

ADVERTISEMENT

ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 2, 2022

Leave a Comment