ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 14 ಜನವರಿ 2020
ಶಾಸಕ ಸೋಮಶೇಖರ ರೆಡ್ಡಿ ಬಂಧಿಸುವಂತೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ಘಟಕದ ಕಾರ್ಯಕರ್ತರನ್ನೇ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಯಿತು.
ಪ್ರತಿಭಟನೆಗೇನು ಕಾರಣ?
ಅಲ್ಪಸಂಖ್ಯಾತರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ, ಶಾಂತಿ, ಸೌಹಾರ್ದತೆ ಕದಡುತ್ತಿರುವ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಅವರನ್ನು, ಕೂಡಲೆ ಬಂಧಿಸಬೇಕು ಎಂದು ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸೋಮಶೇಖರ ರೆಡ್ಡಿ ಅವರನ್ನು ಬಂಧಿಸಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದರು. ಅಲ್ಲದೆ ಈ ಸಂಬಂಧ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು.
ಡಿಸಿ ಆಫೀಸ್ ಕಾಂಪೌಂಡ್ ದಾಟುವಾಗಲೇ ವಶಕ್ಕೆ
ಪ್ರತಿಭಟನೆ ಮುಗಿಸಿ ಹಿಂತಿರುಗುತ್ತಿದ್ದ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕಾರ್ಯಕರ್ತರನ್ನು ಪೊಲೀಸರು ಅರೆಸ್ಟ್ ಮಾಡಿದರು. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮನೆಗೆ ಮುತ್ತಿಗೆ ಹಾಕುವುದಾಗಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕಾರ್ಯಕರ್ತರು ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಯಿತು.
ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಮಹಮ್ಮದ್ ಆರೀಫ್ ಉಲ್ಲಾ, ನಗರಾಧ್ಯಕ್ಷ ಮಹಮ್ಮದ್ ನಿಹಾಲ್ ಸೇರಿದಂತೆ ಹಲವರನ್ನು ಬಂಧಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
Congress Workers arrested in Shimoga. Congress workers held a protest Against MLA Somashekara Reddy. Shivamogga Live Report.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422