ಶಿವಮೊಗ್ಗದಿಂದ ಮಂಗಳೂರಿಗೆ ನಾಳೆ 8 ಸಾವಿರ ಮಂದಿ, ಗ್ಯಾರಂಟಿ ಯೋಜನೆ ಕುರಿತು ಮಹತ್ವದ ಚರ್ಚೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 16 FEBRUARY 2024

SHIMOGA : ಮಂಗಳೂರಿನಲ್ಲಿ ಫೆ.17ರಂದು ರಾಜ್ಯಮಟ್ಟದ ಬೂತ್ ಅಧ್ಯಕ್ಷರು, ಪದಾಧಿಕಾರಿಗಳ ಸಮಾವೇಶ ಆಯೋಜಿಸಲಾಗಿದೆ. ಜಿಲ್ಲೆಯಿಂದ 8 ಸಾವಿರ ಮಂದಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಂದರೇಶ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಉಸ್ತುವಾರಿ ವೇಣುಗೋಪಾಲ್, ರಣದೀಪ್ ಸುರ್ಜೆವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿಸಲಿದ್ದಾರೆ. ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ತಲುಪಿದೆಯೆ ಎಂದು ಖಚಿತಪಡಿಸಿಕೊಳ್ಳುವ ಕುರಿತು ತಿಳಿವಳಿಕೆ ಮೂಡಿಸಲಾಗುತ್ತದೆ ಎಂದರು.

ಫೆ.24ರಂದು ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಜಿಲ್ಲಾ ಮಟ್ಟದ ಸಮಾವೇಶ ಆಯೋಜಿಸಲಾಗಿದೆ. ಯೋಜನೆಗಳಿಂದ ವಂಚಿತರಾದವರನ್ನು ಸ್ಥಳದಲ್ಲೆ ನೋಂದಣಿ ಮಾಡಲಾಗುತ್ತದೆ ಎಂದು ತಿಳಿಸಿದರು.

ಬಿಜೆಪಿ ದುರಾಡಳಿತದಿಂದ ಜನ ಹಸಿವಿಂದ ತತ್ತರಿಸಿದ್ದಾರೆ. ಜನಕ್ಕೆ ಆರ್ಥಿಕ ನೆರವು ನೀಡಲು ಕಾಂಗ್ರೆಸ್ ಗ್ಯಾರಂಟಿ ಯೋಜನೆ ಘೋಷಿಸಿದೆ. ಆದರೆ ಗ್ಯಾರಂಟಿ ಯೋಜನೆಯ ಕುರಿತು ಬಿಜೆಪಿ ಮುಖಂಡರು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ ಎಂದು ಸುಂದರೇಶ್ ಆಕ್ರೋಶ ವ್ಯಕ್ತಪಡಿಸಿದರು.

ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್, ವಿಧಾನ ಪರಿಷತ್ ಮಾಜಿ ಸದಸ್ಯ ಆರ್. ಪ್ರಸನ್ನ ಕುಮಾರ್, ಚಂದ್ರಭೂಪಾಲ್ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ – ಮಹಿಳಾ ಆಫೀಸರ್‌ಗೆ ವಾಟ್ಸಪ್‌ ಕಾಲ್‌, ರಿಸೀವ್‌ ಮಾಡ್ತಿದ್ದಂತೆ ಕಾದಿತ್ತು ಶಾಕ್‌, ಫೋನ್‌ ಮಾಡಿದ್ರಾ ಲೋಕಾಯುಕ್ತ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 16, 2024

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment