ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 09 ಡಿಸೆಂಬರ್ 2019
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹುಟ್ಟುಹಬ್ಬದ ಹಿನ್ನೆಲೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಆರೋಗ್ಯ ತಪಾಸಣೆ ಶಿಬಿರದಲ್ಲಿ ಸಾವಿರಕ್ಕೂ ಹೆಚ್ಚು ಜನ ಪಾಲ್ಗೊಂಡಿದ್ದರು. ತಜ್ಞ ವೈದ್ಯರಿಂದ ಎಲ್ಲರಿಗು ಆರೋಗ್ಯ ತಪಾಸಣೆ ನಡೆಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಆದಿಚುಂಚನಗಿರಿ ಶಾಲೆ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಆಯೋಜಿಸಲಾಗಿತ್ತು. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಆರೋಗ್ಯ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಿದರು.
ಕಾಂಗ್ರೆಸ್ ನಾಶ ಸಾಧ್ಯವಿಲ್ಲ
ಪಕ್ಷದ ಸಂಸ್ಕೃತಿ ಮತ್ತು ಆಲೋಚನೆಯನ್ನು ಸಮಾಜದಲ್ಲಿ ಗಟ್ಟಿಗೊಳಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡಿದರೆ ಕಾಂಗ್ರೆಸ್ ಪಕ್ಷವನ್ನು ನಾಶ ಮಾಡಲು ಯಾರಿಂದಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು. ದೇಶ ನಿರ್ಮಾಣ ಮತ್ತು ಅಭಿವೃದ್ಧಿ ವಿಚಾರದಲ್ಲಿ ಕಾಂಗ್ರೆಸ್ ಪಕ್ಷವನ್ನು ಯಾರೂ ಕಡೆಗಣಿಸಲು ಆಗುವುದಿಲ್ಲ ಎಂದರು.
ನೆಹರು ಕೊಡುಗೆ ಜನರಿಗೆ ತಿಳಿಸಿ
ಜವಾಹರಲಾಲ್ ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರ ಕುಡುಗೆಯನ್ನು ದೇಶಕ್ಕೆ ತಿಳಿಸಬೇಕಿದೆ. ಆದರೆ ಈ ವಿಚಾರಗಳು ಕಾರ್ಯಕರ್ತರಿಗೆ ಗೊತ್ತಿಲ್ಲ. ಹಾಗಾಗಿ ಜನರಲ್ಲಿ ಅರಿವು ಮೂಡಿಸಲು ಕಾಂಗ್ರೆಸ್ ವಿಫಲವಾಗಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಬೇಸರ ವ್ಯಕ್ತಪಡಿಸಿದರು. ನೆಹರು, ಗಾಂಧಿ ಕುಟುಂಬದ ತ್ಯಾಗದ ಅರಿವಿಲ್ಲದ, ಸ್ವಾತಂತ್ರ್ಯ ನಂತರ ಹುಟ್ಟಿದ ವ್ಯಕ್ತಿಗಳೆಲ್ಲ ಕೆಟ್ಟದಾಗಿ ಮಾತನಾಡುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಸಾಮಾಜಿಕ ನ್ಯಾಯದಡಿ ಆರೋಗ್ಯ ಚಿಕಿತ್ಸೆ
ಕಾಂಗ್ರೆಸ್ ಪಕ್ಷದ ವತಿಯಿಂದ ಸಾಮಾಜಿಕ ನ್ಯಾಯದಡಿ ಬಡವರಿಗೆ ಆರೋಗ್ಯ ಸೇವೆಯನ್ನು ಒದಗಿಸುತ್ತಿದ್ದೇವೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಹೇಳಿದರು. ಇದೇ ವೇಳೆ ಪ್ರಮುಖ ಆಸ್ಪತ್ರೆಯ ವೈದ್ಯರಿಂದ ಸಾವಿರಕ್ಕೂ ಹೆಚ್ಚು ಜನರ ಆರೋಗ್ಯ ತಪಾಸಣೆ ನಡೆಸಲಾಯಿತು.
ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ವಿಧಾನ ಪರಿಷತ್ ಮಾಜಿ ಸದಸ್ಯ ಶಾಂತವೀರಪ್ಪಗೌಡ, ಮುಖಂಡರಾದ ಎಸ್.ಪಿ.ಶೇಷಾದ್ರಿ, ತೀ.ನಾ.ಶ್ರೀನಿವಾಸ್, ಚಂದ್ರಭೂಪಾಲ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
Congress Holds health camp on account of Former Prime Minister Indira Gandhi’s Birthday in Shimoga. Former Minister Kagodu Thimmappa inaugurates the programme. Congress District President H S Sundaresh and others were present in the event.