ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಅಕ್ಟೋಬರ್ 2020
ಕಾಂಗ್ರೆಸ್ ಪಕ್ಷ ಕೊರೊನಾ ನಿರ್ಮೂಲನೆಗಾಗಿ ‘ಕಾಂಗ್ರೆಸ್ ಆರೋಗ್ಯ ಅಭಯ ಹಸ್ತ’ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಸಲಾಗುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಎಸ್.ಸುಂದರೇಶ್, ಈ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರು ವಾರಿಯರ್ಸ್ಗಳಾಗಿ ಮನೆ ಮನೆಗೆ ತೆರಳಿ ಜನರ ಆರೋಗ್ಯ ಪರೀಕ್ಷೆ, ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸುವುದು, ಮುಂಜಾಗ್ರತಾ ಕ್ರಮ ಹಾಗೂ ಜಾಗೃತಿ ಬಗ್ಗೆ ತಿಳಿವಳಿಕೆ ನೀಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಸೇವೆ ನಿರ್ವಹಿಸುತ್ತಿರುವ ವಾರಿಯರ್ಸ್ಗಳಿಗೆ ಕೆಪಿಸಿಸಿ ವತಿಯಿಂದ ಜಿಲ್ಲೆಗೆ 800 ಇನ್ಸುರೆನ್ಸ್ ಪಾಲಿಸಿಗಳು ಬಂದಿವೆ ಎಂದರು.
ವಾರಿಯರ್ಸ್ಗೆ 1 ಲಕ್ಷ ರೂ.ಮೊತ್ತದ ಆರೋಗ್ಯ ವಿಮೆ ಪಾಲಿಸಿಗಳನ್ನು ಇಂದು ಸಾಂಕೇತಿಕವಾಗಿ ವಿತರಣೆ ಮಾಡುತ್ತಿದ್ದು, ಇನ್ನುಳಿದಂತೆ ಎಲ್ಲ ಬ್ಲಾಕ್ ಮಟ್ಟದಲ್ಲಿ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.
ವಿಧಾನಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್ ಮಾತನಾಡಿ, ಕರೋನಾ ಹತೋಟಿಗೆ ರಾಜ್ಯ ಸರ್ಕಾರ ವಿಫಲವಾಗಿದ್ದು, ಡಿ.ಕೆ.ಶಿವಕುಮಾರ್ ಅವರು ಕೊರೋನಾ ತಡೆಗಟ್ಟಲು ಕಾಂಗ್ರೆಸ್ ಆರೋಗ್ಯ ಅಭಯ ಹಸ್ತ ಕಾರ್ಯಕ್ರಮ ಜಾರಿಗೆ ತಂದಿದ್ದಾರೆ. ಪಕ್ಷದ ವಾರಿಯರ್ಸ್ಗಳು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ ಎಂದರು.
ಡಾ.ಶ್ರೀನಿವಾಸ್, ವಿಶ್ವನಾಥ್ ಕಾಶಿ, ನಾಗರಾಜ್, ಎಸ್.ರವಿಕುಮಾರ್, ಸಿ.ಎಸ್.ಚಂದ್ರಭೂಪಾಲ್, ಹನುಮಂತು, ಬಾಬು ಇನ್ನಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]