ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಫೆಬ್ರವರಿ 2021
ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಘೇರಾವ್ ಹಾಕಲು ಯೋಜಿಸಿದ್ದ ಜಿಲ್ಲಾ ಕಾಂಗ್ರೆಸ್ ಮುಖಂಡರನ್ನು ಶಿವಮೊಗ್ಗದಲ್ಲಿ ಪೊಲೀಸರು ಬಂಧಿಸಿದರು.
ನಮ್ಮೊಲುಮೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಸಿಎಂಗೆ ಘೆರಾವ್ ಹಾಕಲು ನಿರ್ಧರಿಸಲಾಗಿತ್ತು.
ಕಾಂಗ್ರೆಸ್ ಕಚೇರಿಯನ್ನು ಸುತ್ತುವರಿದ ಪೊಲೀಸರು, ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಸೇರಿದಂತೆ ಕಾರ್ಯಕರ್ತರನ್ನು ಬಂಧಿಸಿದರು.
ಘೇರಾವ್‌ಗೆ ಕಾರಣವೇನು?
ಬೆಲೆ ಏರಿಕೆಯಿಂದ ಜನರು ಕಂಗೆಟ್ಟಿದ್ದಾರೆ. ಅದನ್ನು ನಿಯಂತ್ರಿಸಲು ಸರ್ಕಾರ ವಿಫಲವಾಗಿದೆ.
ಬೆಲೆ ಏರಿಕೆ ಬಿಸಿ ನಡುವೆ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಲಾಗುತ್ತಿದೆ.
ಕರೋನ ಎರಡನೆ ಅಲೆ ಬಗ್ಗೆ ಎಚ್ಚರದಿಂದ ಇರುವಂತೆ ಸರ್ಕಾರ ಹೇಳುತ್ತದೆ. ಆದರೆ ಸಿಎಂಗೆ ಸನ್ಮಾನ ಕಾರ್ಯಕ್ರಮ ನಡೆಸಿ ಸಾವಿರಾರು ಸಂಖ್ಯೆಯ ಜನರನ್ನು ಸೇರಿಸುತ್ತಿದ್ದಾರೆ ಎಂದು ಕಾಂಗ್ರೆಸಿಗರು ಆರೋಪಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200