ಆನ್‌ಲೈನ್‌ ಮೂಲಕವೇ ಸುದ್ದಿಗೋಷ್ಠಿ, ಶಿವಮೊಗ್ಗ ಕಾಂಗ್ರೆಸ್‌ನಿಂದ ವಿಭಿನ್ನ ಪ್ರಯೋಗ, ಇಬ್ಬರು ಸಚಿವರ ರಾಜೀನಾಮೆಗೆ ಆಗ್ರಹ

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಜುಲೈ 2020

ಸಾಮಾಜಿಕ ಅಂತರ, ಕೋವಿಡ್ ನಿಯಂತ್ರಣ ಕುರಿತು ಸರ್ಕಾರದ ಮಾರ್ಗಸೂಚಿ ಪಾಲಿಸಬೇಕು ಅನ್ನುವ ಕಾರಣಕ್ಕೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಆನ್‍ ಲೈನ್ ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಆನ್‍ ಲೈನ್ ಮೂಲಕ ಪತ್ರಿಕಾಗೋಷ್ಠಿ ನಡೆಸಲಾಗಿದೆ.

107421373 313900479984274 202840958297171077 n.jpg? nc cat=110& nc sid=110474& nc ohc=vkMw22w1qMwAX 00OcP& nc ht=scontent.fixe1 1

ಆನ್‍ ಲೈನ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ‍್ಯಕ್ಷ ಹೆಚ್.ಎಸ್.ಸುಂದರೇಶ್‍ ಅವರು, ಕರೋನಾದಿಂದಾಗಿ ರಾಜ್ಯ ಹಾಗೂ ದೇಶದಲ್ಲಿ ಜನ ಸಂಕಷ್ಟ ಅನುಭವಿಸುತ್ತಿದ್ದಾರೆ. ಕರೋನಾದ ಸಂದರ್ಭದಲ್ಲಿಯೂ ಪಿಪಿಇ ಕಿಟ್ ಹಾಗೂ ಔಷಧ ಖರೀದಿಯಲ್ಲಿ ಆರೋಗ್ಯ ಸಚಿವರು ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು ಭ್ರಷ್ಟಾಚಾರ ನಡೆಸಿದ್ದು, ಅವರನ್ನು ಕೂಡಲೇ ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿದರು.

ಕಳಪೆ ದರ್ಜೆಯ ಪಿಪಿಇ ಕಿಟ್ ಗಳನ್ನು ಖರೀದಿ ಮಾಡಿ ಭ್ರಷ್ಟಾಚಾರ ನಡೆಸಲಾಗಿದೆ. ಇದನ್ನು ಕ್ಷಮಿಸಲು ಸಾಧ್ಯವೇ. ಇದೊಂದು ಹೇಯ ಕೃತ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಯಾವ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದೆಯೋ ಅಲ್ಲಿ ಕರೋನಾ ರಣಕೇಕೆ ಹೆಚ್ಚಾಗುತ್ತಿದೆ ಎಂದು ಆರೋಪಿಸಿದರು.

ಇದು ಬಿಜೆಪಿಯವರಿಗೆ ಜನರ ಬಗ್ಗೆ ಇರುವ ಕಾಳಜಿ ತೋರಿಸುತ್ತಿದೆ. ಕೂಡಲೇ ಸರ್ಕಾರ ಪ್ರತಿ ಜಿಲ್ಲೆಗಳಿಗೆ ಕನಿಷ್ಟ 20 ಆಂಬುಲೆನ್ಸ್‍ಗಳ ವ್ಯವಸ್ಥೆ ಮಾಡಬೇಕು. ಕರೋನಾ ಚಿಕಿತ್ಸೆ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂದು ಆಗ್ರಹಿಸಿದರು.

https://www.facebook.com/100339694870533/videos/754461505293749/?t=1426

ಜನ ಒಟ್ಟಿಗೆ ಸೇರಬಾರದು ಎಂಬ ಕಾರಣಕ್ಕೆ ಇನ್ನು ಮುಂದೆ ಪತ್ರಿಕಾಗೋಷ್ಟಿ ಹಾಗೂ ಕಾಂಗ್ರೆಸ್ ಕಾರ್ಯಕ್ರಮಗಳನ್ನು ಆನ್‍ಲೈನ್ ಮೂಲಕವೇ ನಡೆಸಲಾಗುವುದು ಎಂದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

Leave a Comment