ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIKARIPURA NEWS | 21 ಅಕ್ಟೋಬರ್ 2020
ಕಳೆದ ವರ್ಷ ಶಿವಮೊಗ್ಗದಲ್ಲಿ ಸುರಿದ ಭಾರಿ ಮಳೆಗೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮನೆ ಕಳೆದುಕೊಂಡವರಿಗೆ ಬಾಕಿ ಇರುವ ಪರಿಹಾರದ ಹಣವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಪಾಲಿಕೆ ಸದಸ್ಯರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಹೆಚ್.ಸಿ.ಯೋಗೇಶ್ ನೇತೃತ್ವದಲ್ಲಿ ಶಿಕಾರಿಪುರದಲ್ಲಿ ಸಿಎಂ ನಿವಾಸದಲ್ಲಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.
ನೆರೆ ಸಂದರ್ಭ ಸಿಎಂ ಶಿವಮೊಗ್ಗಕ್ಕೆ ಭೇಟಿ ನೀಡಿದ್ದ ವೇಳೆ ಸಂಪೂರ್ಣ ಹಾನಿಯಾದ ಮನೆಗೆ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದೀರಿ. ಆದರೆ ಕೇವಲ ಒಂದು ಲಕ್ಷ ರೂ. ಪರಿಹಾರವನ್ನು ಮಾತ್ರ ಬಿಡುಗಡೆ ಮಾಡಲಾಗಿದೆ. 4 ಲಕ್ಷ ರೂ. ಬಾಕಿ ಇದೆ. ಇದನ್ನು ಕೂಡಲೆ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಪಾಲಿಕೆ ಸದಸ್ಯರಾದ ಶಮೀರ್ ಖಾನ್, ರೇಖಾ ರಂಗನಾಥ್, ಯಮುನಾ ರಂಗೇಗೌಡ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್ ಇದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]