ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | RALLY | 10 ಮೇ 2022
ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರದ ದುರಾಡಳಿತವನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಜನಧ್ವನಿ ಪ್ರತಿಭಟನೆ ಮೆರವಣಿಗೆ ಆಯೋಜಿಸಲಾಗಿತ್ತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಶಿವಮೊಗ್ಗದ ಅಶೋಕ ಸರ್ಕಲ್’ನಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಅಶೋಕ ಸರ್ಕಲ್’ನಿಂದ ಬಾಲರಾಜ ಅರಸ್ ರಸ್ತೆವರೆಗೂ ಮೆರವಣಿಗೆ ನಡೆಯಿತು.
ಪಾದಯಾತ್ರೆ ಮಾಡಿದ ಪ್ರಮುಖರು
ಬಿಜೆಪಿ ಸರ್ಕಾರದ ದುರಾಡಳಿತವನ್ನು ಖಂಡಿಸಿ ಅಶೋಕ ಸರ್ಕಲ್’ನಿಂದ ಪಾದಯಾತ್ರೆ ನಡೆಸಲಾಯಿತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್, ಶೃಂಗೇರಿ ಶಾಸಕ ರಾಜೇಗೌಡ, ಮಾಜಿ ಶಾಸಕ ಮಧು ಬಂಗಾರಪ್ಪ, ಬೇಳೂರು ಗೋಪಾಲಕೃಷ್ಣ, ಕೆ.ಜಿ.ಪ್ರಶಾಂತ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್ ಸೇರಿದಂತೆ ಹಲವು ಪ್ರಮುಖ ನಾಯಕರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಬಿಜೆಪಿ ವಿರುದ್ದ ಘೋಷಣೆ
ಮೆರವಣಿಗೆ ಹಾದಿಯುದ್ದಕ್ಕೂ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಎತ್ತಿನಗಾಡಿ ರಾಲಿ ನಡೆಸಲಾಯಿತು. ಇನ್ನು, ಚೇರ್ ಒಂದಕ್ಕೆ ಮುಖ್ಯಮಂತ್ರಿ ಗಾದಿಗೆ 2400 ಕೋಟಿ ರೂ. ಎಂದು ಅಣಕು ಪ್ರದರ್ಶನ ಮಾಡಲಾಯಿತು.
ಕಾರ್ಯಕರ್ತರ ಗಮನ ಸಳೆದ ಡಿಕೆಶಿ
ಶಿವಮೊಗ್ಗದ ಬಾಲರಾಜ ಅರಸ್ ರಸ್ತೆಯಲ್ಲಿರುವ ಭೋವಿ ಸಭಾ ಭವನದವರೆಗೂ ಮೆರವಣಿಗೆ ನಡೆಸಲಾಯಿತು. ಮೆರವಣಿಗೆ ಹಾದಿ ಉದ್ದಕ್ಕೂ ಕಾರ್ಯಕರ್ತರು ಡಿ.ಕೆ.ಶಿವಕುಮಾರ್ ಅವರ ಪರವಾಗಿ ಘೋಷಣೆ ಮೊಳಗಿಸಿದರು. ಕೆಲವರು ಅವರೊಂದಿಗೆ ಸೆಲ್ಫಿ, ಫೋಟೊಗೆ ಮುಗಿಬಿದ್ದರು. ಡಿ.ಕೆ.ಶಿವಕುಮಾರ್ ಅವರ ಸುತ್ತಲು ನೂಕುನುಗ್ಗಲು ಉಂಟಾಗಿತ್ತು.
ಪ್ರತಿಭಟನಾ ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಕೂಡ ಪಾಲ್ಗೊಂಡಿದ್ದವು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ, ಇಲ್ಲಿದೆ ಫೋಟೊ ಆಲ್ಬಂ
ಇದನ್ನೂ ಓದಿ – ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















