ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಆಗಸ್ಟ್ 2020
ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ, ಕೊರೋನಾ ನಿಯಂತ್ರಣದಲ್ಲಿ ನಡೆದಿರುವ ಭ್ರಷ್ಟಾಚಾರ ತನಿಖೆಗೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಇವತ್ತು ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಿತು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಪಿಎಂಸಿ, ಕಾರ್ಮಿಕ, ಭೂ ಸುಧಾರಣಾ ಕಾಯ್ದೆಗಳಿಗೆ ತಿದ್ದುಪಡಿ ತಂದಿದೆ. ಈ ಎಲ್ಲ ಕಾಯ್ದೆಗಳು ರೈತರ ವಿರೋಧಿಗಳೇ ಆಗಿವೆ. ಇದರಿಂದ ಖಾಸಗಿ ಬಂಡವಾಳದಾರರಿಗೆ ಅನುಕೂಲವಾಗುತ್ತದೆ. ಎಪಿಎಂಸಿ ತಿದ್ದುಪಡಿ ಕಾಯ್ದೆಯಿಂದ ರೈತರಿಗೆ ಯಾವ ಅನುಕೂಲವೂ ಆಗುವುದಿಲ್ಲ. ಸಂಪೂರ್ಣ ಶೋಷಣೆಗೆ ಒಳಗಾಗುತ್ತಾರೆ ಎಂದು ದೂರಿದರು.
ಕೈಗಾರಿಕಾ ಉದ್ಯಮಗಳು ಕಾರ್ಮಿಕ ಕಾಯ್ದೆಯಿಂದ ನಾಶ ಹೊಂದುತ್ತವೆ. ಕಾರ್ಮಿಕರು ಬೀದಿಪಾಲಾಗುತ್ತಾರೆ. ಅವರು ಅತಂತ್ರರಾಗುತ್ತಾರೆ. ಆದ್ದರಿಂದ ಈ ಎಲ್ಲ ಕಾಯ್ದೆಗಳನ್ನು ವಾಪಾಸ್ ಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಕೊರೋನಾ ನಿಯಂತ್ರಣದಲ್ಲಿ ಭಾರೀ ಭ್ರಷ್ಟಾಚಾರದಲ್ಲಿ ನಡೆದಿದೆ. ಪಿಪಿಇ ಕಿಟ್ ಖರೀದಿ, ಸ್ಯಾನಿಟೈಸರ್ ಖರೀದಿ, ಮಾಸ್ಕ್ ಮತ್ತು ಆಕ್ಸಿಜನ್ ಉಪಕರಣ, ಥರ್ಮಲ್ ಸ್ಕ್ಯಾನರ್, ಆಕ್ಸಿಜನ್ ಸಿಲಿಂಡರ್ ಸೇರಿದಂತೆ ಉಪಕರಣಗಳ ಖರೀದಿಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿದ್ದು, ಇದನ್ನು ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಪ್ರಮುಖರಾದ ಕೆ.ಬಿ.ಪ್ರಸನ್ನಕುಮಾರ್, ಹೆಚ್.ಎಂ.ಚಂದ್ರಶೇಖರಪ್ಪ, ಕಲಗೋಡು ರತ್ನಾಕರ್, ವೇದಾ ವಿಜಯಕುಮಾರ್, ಚಂದ್ರ ಭೂಪಾಲ್, ಕೆ.ರಂಗನಾಥ್, ಎಸ್.ಪಿ.ಶೇಷಾದ್ರಿ, ಹೆಚ್.ಪಿ.ಗಿರೀಶ್, ಶಾಮೀರ್ ಖಾನ್ ಸೇರಿದಂತೆ ಹಲವರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]