ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 11 JUNE 2021
ಪೆಟ್ರೋಲ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ವಿವಿಧ ಪೆಟ್ರೋಲ್ ಬಂಕ್‍ಗಳ ಮುಂದೆ ಪ್ರತಿಭಟನೆ ನಡಸಲಾಗುತ್ತಿದೆ. ಶಿವಮೊಗ್ಗ ನಗರದ ಐದಕ್ಕೂ ಹೆಚ್ಚು ಪೆಟ್ರೋಲ್ ಬಂಕ್‍ಗಳ ಮುಂದೆ ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳು ಪ್ರತಿಭಟನೆ ನಡೆಸುತ್ತಿವೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಎಲ್ಲೆಲ್ಲಿ ಹೇಗಿದೆ ಪ್ರತಿಭಟನೆ?
ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್ ನೇತೃತ್ವದಲ್ಲಿ ಪೆಟ್ರೋಲ್ ಬಂಕ್ ಒಂದರ ಮುಂದೆ ಬಾಳೆ ಕಂದು ಹಿಡಿದು ಪ್ರತಿಭಟನೆ ನಡೆಸಲಾಯಿತು. ಅಚ್ಚೇ ದಿನ ಬಂದಿದೆ ಎಂದು ವಿಡಂಬನಾತ್ಮಕವಾಗಿ ಬಾಳೆ ಕಂದು ಹಿಡಿದು ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ಕಾಂಗ್ರೆಸ್ ವತಿಯಿಂದ ಶಿವಮೊಗ್ಗದ ಕುವೆಂಪು ರಸ್ತೆಯಲ್ಲಿರುವ ನಂದಿ ಪೆಟ್ರೋಲ್ ಬಂಕ್ ಮುಂದೆ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ನೇತೃತ್ವದಲ್ಲಿ ಪೆಟ್ರೋಲ್ ಬಂಕ್ ಮುಂದೆ ಧರಣಿ ನಡೆಸಲಾಯಿತು. ಪ್ರಮುಖರಾದ ರವಿ ಕುಮಾರ್, ದೇವೇಂದ್ರಪ್ಪ, ಪಲ್ಲವಿ ಸೇರಿದಂತೆ ಹಲವರು ಇದ್ದರು.
ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ನೇತೃತ್ವದಲ್ಲಿ ಬಿ.ಹೆಚ್.ರಸ್ತೆಯ ದೀಪಕ್ ಪೆಟ್ರೋಲ್ ಬಂಕ್ ಮುಂದೆ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.
ದುರ್ಗಿಗುಡಿಯ ಹೆಚ್.ಎಂ.ಫ್ಯೂಯಲ್ಸ್ ಮುಂದೆ ಯುವ ಕಾಂಗ್ರೆಸ್ ಕಾರ್ಯಕರ್ತರು ತಮಟೆ ಚಳವಳಿ ನಡೆಸಿದರು. ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ.ಗಿರೀಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ಮುಖಂಡ ರಂಗನಾಥ್, ಕಾರ್ಪೊರೇಟರ್ ರೇಖಾ ರಂಗನಾಥ್, ಪ್ರಮುಖರಾದ ಕಿರಣ್, ಕುಮರೇಶ್ ಸೇರಿದಂತೆ ಹಲವರು ಇದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]