ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಡಿಸೆಂಬರ್ 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ ನೆಡೆಸಲಾಯಿತು. ಬೆಲೆ ಏರಿಕೆ ಖಂಡಿಸಿ ಉತ್ತರ ಪ್ರದೇಶದ ಅಮೇಥಿಯಲ್ಲಿ ಕಾಂಗ್ರೆಸ್ ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರು ಪಾದಯಾತ್ರೆ ನಡೆಸುತ್ತಿದ್ದಾರೆ. ಅದಕ್ಕೆ ಬೆಂಬಲವಾಗಿ ಶಿವಮೊಗ್ಗದಲ್ಲಿಯೂ ಕಾಂಗ್ರೆಸಿಗರು ಪ್ರತಿಭಟನಾ ಮೆರವಣಿಗೆ ನಡೆಸಿದರು.
ರಾಮಣ್ಣ ಶ್ರೇಷ್ಠಿ ಪಾರ್ಕ್’ನಿಂದ ಗಾಂಧಿ ಬಜಾರ್ ಮೂಲಕ ಅಮೀರ್ ಅಹಮದ್ ಸರ್ಕಲ್, ನೆಹರೂ ರೋಡ್, ಗೋಪಿ ಸರ್ಕಲ್, ಬಾಲರಾಜ ಅರಸ್ ರಸ್ತೆ ಮೂಲಕ ಮಹವೀರ ವೃತ್ತಕ್ಕೆ ಆಗಮಿಸಿ ಕಾಂಗ್ರೆಸಿಗರು ಪ್ರತಿಭಟನೆ ನಡೆಸಿದರು.
ಬಿಜೆಪಿ ವಿರುದ್ಧ ತೀವ್ರ ಆಕ್ರೋಶ
ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬಂದ ಮೇಲೆ ಅಡುಗೆ ಅನಿಲ, ತೈಲೋತ್ಪನ್ನ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಬೆಲೆ ಏರಿಕೆ ನಿಯಂತ್ರಿಸಬೇಕಿದ್ದ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಹಾಗಾಗಿ ಜನ ಸಾಮಾನ್ಯರು ಬದುಕುವುದೆ ಕಷ್ಟಕರವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ವಿರುದ್ಧ ಘೋಷಣೆ ಕೂಗಿದರು.
ಪ್ರತಿಭಟನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಪ್ರಣಾಳಿಕೆಯಲ್ಲಿ ಅಚ್ಛೇ ದಿನ್ ಘೋಷಣೆ ಮಾಡಿ ಅಧಿಕಾರಕ್ಕೆ ಬಂದರು. ಪ್ರತಿ ವಿಚಾರದಲ್ಲಿಯೂ ತೆರಿಗೆ ಹೆಚ್ಚಳ ಮಾಡಿ ಜನರ ಮೇಲೆ ಹೊರೆ ಹೊರಿಸಿದ್ದಾರೆ. ಡಾ. ಮನಮೋಹನ್ ಸಿಂಗ್ ಅವರು ಇದ್ದ ಸಂದರ್ಭ ಪೆಟ್ರೋಲ್, ಡಿಸೇಲ್, ಅಡುಗೆ ಅನಿಲದ ಬೆಲೆ ಕಡಿಮೆ ಇತ್ತು. ಮೋದಿ ಸರ್ಕಾರ ಬಂದ ಮೇಲೆ ಸೆಸ್ ನೆಪದಲ್ಲಿ ಭಾರಿ ದರ ಏರಿಕೆ ಮಾಡಿದ್ದಾರೆ. ಜನರಿಂದ ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಪ್ರಮುಖರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






