ಶಿವಮೊಗ್ಗ ಲೈವ್.ಕಾಂ | SHIMOGA NEWS | 02 FEBRUARY 2021
ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಡೆಯುತ್ತಿರುವ ಕಳಪೆ ಕಾಮಗಾರಿ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಕಾಂಗ್ರೆಸ್ ವತಿಯಿಂದ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಲಕ್ಷ್ಮೀ ಟಾಕೀಸ್ ಮುಂಭಾಗ ವಿನೋಬನಗರದ ನೂರು ಅಡಿ ರಸ್ತೆಯಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಲಾಯಿತು. ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ದೊಡ್ಡ ಪ್ರಮಾಣದ ಅವ್ಯವಹಾರ ನಡೆಯುತ್ತಿದೆ. ಕಳಪೆ ಕಾಮಗಾರಿಗಳು ನಡೆಸಲಾಗುತ್ತಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಶಿವಮೊಗ್ಗ ನಗರದ ವಿವಿಧೆಡೆ, ಕಾಮಗಾರಿ ನಡೆಸಿದ ಕಡೆಯಲ್ಲೇ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ನೂರಾರು ಕೋಟಿ ರೂ. ತೆರಿಗೆ ಹಣ ಪೋಲು ಮಾಡಲಾಗುತ್ತಿದೆ ಎಂದು ಕಾಂಗ್ರೆಸಿಗರು ಆರೋಪಿಸಿದರು.
‘ನೂರಾರು ಕೋಟಿ ರೂ. ಅವ್ಯವಹಾರದಲ್ಲಿ ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಅಧಿಕಾರಿಗಳು ಇದರಲ್ಲಿ ಶಾಮೀಲಾಗಿದ್ದಾರೆ. ಉನ್ನತ ಮಟ್ಟದ ತನಿಖೆ ನಡೆಸಬೇಕು’ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್ ಆರೋಪಿಸಿದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]