SHIMOGA | ಅಬ್ಬಲಗೆರೆಯಲ್ಲಿ ಸವಳಂಗ ರಸ್ತೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ, ಕಾರ್ಯಕರ್ತರ ಬಂಧನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 JANUARY 2021

ಕಲ್ಲಗಂಗೂರು ಕಲ್ಲು ಕ್ವಾರಿಯಲ್ಲಿ ನಡೆದ ಭೀಕರ ಸ್ಫೋಟದ ತನಿಖೆಗೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇವತ್ತು ಅಬ್ಬಲಗೆರೆ ಗ್ರಾಮ ಪಂಚಾಯತ್ ಕಚೇರಿ ಎದುರು ಸವಳಂಗ ರಸ್ತೆಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸಲಾಯಿತು.

ಘಟನೆಯಲ್ಲಿ ಅಮಾಯಕರು ಬಲಿಯಾಗಿದ್ದು, ಸರ್ಕಾರ ನಿರ್ಲಕ್ಷ ಧೋರಣೆ ತೋರಿದೆ ಹಾಗೂ ಕಲ್ಲು ಕ್ವಾರೆ ಮಾಲೀಕರನ್ನು ರಕ್ಷಿಸಲು ಹೊರಟಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಘಟನೆಗೆ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ ರಾಜೀನಾಮೆ ನೀಡಬೇಕು. ಅಕ್ರಮ ಕಲ್ಲು ಗಣಿಗಾರಿಕೆ ಮಾಡುವ ಬಿಜೆಪಿ ಪ್ರಭಾವಿ ಮುಖಂಡರನ್ನು ಬಂಧಿಸಬೇಕೆಂದು ಆಗ್ರಹಿಸಿದರು.

ಸಾರ್ವಜನಿಕರ ವಿರೋಧವಿದ್ದರೂ ಕೆಲವು ಬಿಜೆಪಿ ನಾಯಕರು ಹಲವು ವರ್ಷಗಳಿಂದ ಅಕ್ರಮ ಗಣಿಗಾರಿಕೆಗೆ ಪ್ರೋತ್ಸಾಹ ನೀಡುತ್ತ ಅಧಿಕಾರಿಗಳ ಮೇಲೆ ದರ್ಪ ತೋರಿಸುತ್ತಾ, ಅವಕಾಶ ನೀಡಿದ ಪರಿಣಾಮವೇ ಈ ದುರ್ಘಟನೆ ಸಂಭವಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಸ್ತೆ ತಡೆ ನಡೆಸಿದ ಕಾಂಗ್ರೆಸ್ ಮುಖಂಡರು ಪೊಲೀಸರು ಬಂಧಿಸಿ, ಬಳಿಕ ಬಿಡುಗಡೆ ಮಾಡಿದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಹೆಚ್.ಎಸ್. ಸುಂದರೇಶ್, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ, ಡಾ. ಶ್ರೀನಿವಾಸ್ ಕರಿಯಣ್ಣ, ಎಸ್. ರವಿಕುಮಾರ್, ಎಲ್. ರಾಮೇಗೌಡ, ಕೆ. ದೇವೇಂದ್ರಪ್ಪ, ಯಮುನಾ ರಂಗೇಗೌಡ, ಸೈಯದ್ ವಾಹಿದ್ ಅಡ್ಡು, ವಿಜಯಲಕ್ಷ್ಮಿ ಪಾಟೀಲ್, ಶರತ್, ಎಸ್.ಪಿ.ಶೇಷಾದ್ರಿ, ಕೆ. ಚೇತನ್, ಸಿ.ಜಿ.  ಮಧುಸೂಧನ್ ಮತ್ತಿತರರು ಇದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment