ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 26 SEPTEMBER 2024 : ಬಿಜೆಪಿ – ಜೆಡಿಎಸ್ ಪಕ್ಷಗಳ ಷಡ್ಯಂತ್ರ ಖಂಡಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೈತಿಕ ಬೆಂಬಲ ಸೂಚಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಜ್ಞೆ ಸ್ವೀಕರಿಸಿದರು. ಗಾಂಧಿ ಪಾರ್ಕ್‌ನಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ – ಜೆಡಿಎಸ್ ಷಡ್ಯಂತ್ರದ ವಿರುದ್ಧ ಘೋಷಣೆ (Protest) ಕೂಗಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಯಾರೆಲ್ಲ ಏನೆಲ್ಲ ಹೇಳಿದರು?
» ಆಯನೂರು ಮಂಜುನಾಥ್, ಮಾಜಿ ಸಂಸದ ಬಿಜೆಪಿಯ ನಾಲ್ವರು ಮುಖ್ಯಮಂತ್ರಿಗಳ ಪೈಕಿ ಮೂವರ ಮೇಲೆ ಆರೋಪ ಇದೆ. ಕೆಲವರು ಬೇಲ್ ಮೇಲೆ ಹೊರಗಿದ್ದಾರೆ. ಎಫ್‌ಐಅರ್ ಕೂಡ ಹಾಕಲಾಗಿದೆ. ಏಡ್ಸ್ ಹರಡುವ ಶಾಸಕ, ಹೆಂಗಸರಷ್ಟೆ ಅಲ್ಲ ಗಂಡಸರ ಮೇಲೂ ಅತ್ಯಾಚಾರ ಮಾಡುವವರು ಬಿಜೆಪಿಯಲ್ಲಿದ್ದಾರೆ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಬೇಲ್ ಮೇಲೆ ಹೊರಗಿದ್ದಾರೆ. ಇವರಿಗೆಲ್ಲ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುವ ನೈತಿಕತೆ ಇಲ್ಲ.
» ಬಲ್ಕಿಷ್ ಬಾನು, ವಿಧಾನ ಪರಿಷತ್ ಸದಸ್ಯೆ ರಾಜ್ಯಪಾಲರು ಬಿಜೆಪಿಯ ಪ್ರತಿರೂಪವಾಗಿದ್ದಾರೆ. ಸಂಘ ಪರಿವಾರದ ಸದಸ್ಯರಂತೆ ವರ್ತಿಸುತ್ತಿದ್ದಾರೆ. ಇದಕ್ಕೆಲ್ಲ ಕಾಂಗ್ರೆಸ್ ಹೆದರುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಕ್ತಿ ಕುಂದಿಸಲು ಸಾಧ್ಯವಿಲ್ಲ. ಅವರು ರಾಜೀನಾಮೆ ಕೊಡುವುದಿಲ್ಲ. ಅವರೇ ಇಂದಿಗೂ ನಮ್ಮ ಮುಖ್ಯಮಂತ್ರಿ.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಪ್ರಸನ್ನ ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಪ್ರಮುಖರಾದ ರಮೇಶ್ ಹೆಗ್ಡೆ, ಎಸ್.ಕೆ.ಮರಿಯಪ್ಪ, ಚಂದ್ರಭೂಪಾಲ್, ಜಿ.ಡಿ.ಮಂಜುನಾಥ್, ಮಧುಸೂದನ್, ಚೇತನ್ ಸೇರಿ ಹಲವರು ಇದ್ದರು.
ಇದನ್ನೂ ಓದಿ » ಜಾಮೀನು ಕೊಡಲು ಬೆಂಗಳೂರಿನಿಂದ ಬಂದ ಮಹಿಳೆ ವಿರುದ್ಧವೇ ದಾಖಲಾಯ್ತು ಕೇಸ್, ಯಾಕೆ?