ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 16 ಡಿಸೆಂಬರ್ 2019
ಪೌರತ್ವ ತಿದ್ದುಪಡಿ ಮಸೂದೆ ಸಂವಿಧಾನ ವಿರೋಧಿಯಾಗಿದೆ ಎಂದು ಆರೋಪಿಸಿ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ನೇತೃತ್ವದಲ್ಲಿ ಇವತ್ತು ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪೊಲೀಸರು ಉಪವಾಸ ಕುಳಿತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಗಾಂಧಿ ಪಾರ್ಕ್ ಮುಂಭಾಗ ಉಪವಾಸ ಸತ್ಯಾಗ್ರಹ ಆಯೋಜಿಸಲಾಗಿತ್ತು. ಮಾಜಿ ಶಾಸಕ ಪ್ರಸನ್ನಕುಮಾರ್, ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ರಮೇಶ್ ಹೆಗ್ಡೆ ಸೇರಿದಂತೆ ಹಲವರು ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರು.
ದೇಶಕ್ಕೆ ಆತಂಕ ತಂದಿದೆ
ಪೌರತ್ವ ಕಾಯ್ದೆಗೆ ತಿದ್ದುಪಡಿ ತಂದು ಕೇಂದ್ರ ಸರ್ಕಾರ, ದೇಶದಲ್ಲಿ ಆತಂಕದ ಪರಿಸ್ಥಿತಿ ನಿರ್ಮಿಸಿದೆ. ಮೂರ್ನಾಲ್ಕು ತಲೆಮಾರಿನ ದಾಖಲೆಗಳನ್ನು ಒದಗಿಸಬೇಕು ಎಂದು ಹೇಳಲಾಗುತ್ತಿದೆ. ಈ ಮೂಲಕ ದೊಡ್ಡ ಮಟ್ಟದಲ್ಲಿ ಸಮಸ್ಯೆ ಸೃಷ್ಟಿಸಲಾಗುತ್ತಿದೆ ಎಂದು ಮಾಜಿ ಶಾಸಕ ಪ್ರಸನ್ನಕುಮಾರ್ ಆರೋಪಿಸಿದರು.
ಸತ್ಯಾಗ್ರಹಿಗಳು ಅರೆಸ್ಟ್
ಗಾಂಧಿ ಪಾರ್ಕ್ ಮುಂದೆ ಸತ್ಯಾಗ್ರಹ ಮಾಡುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ. ಉಪವಾಸ ಸತ್ಯಾಗ್ರಹ ನಡೆಸದಂತೆ ಪೊಲೀಸರು ಮನವಿ ಸೂಚಿಸಿದ್ದರು. ಆದರೆ ಕಾಂಗ್ರೆಸ್ ಕಾರ್ಯಕರ್ತರು ಉಪವಾಸ ಕುಳಿತಿದ್ದರಿಂದ ಎಲ್ಲರನ್ನು ಬಂಧಿಸಲಾಯಿತು. ಈ ವೇಳೆ ಗಾಂಧಿ ಪಾರ್ಕ್ ಮುಂಭಾಗ ಕೆಲಕಾಲ ಹೈಡ್ರಾಮಾ ನಡೆಯಿತು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
Former MLA Prasanna Kumar and Congress Party Workers led a fasting protest in Shimoga Gandhi Park. Police Arrest the protesters.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422