SHIVAMOGGA LIVE | 15 JULY 2023
SHIMOGA : ನಗರದ ಇಂದಿರಾ ಕ್ಯಾಂಟೀನ್‌ಗೆ (Indira Canteen) ಕಾಂಗ್ರೆಸ್ ಪಕ್ಷದ ನಿಯೋಗ ಭೇಟಿ ಪರಿಶೀಲನೆ ನಡೆಸಿತು. ಈ ವೇಳೆ ಇಂದಿರಾ ಕ್ಯಾಂಟೀನ್‌ನ ಅವಸ್ಥೆ ಕಂಡು ನಿಯೋಗದಲ್ಲಿದ್ದವರು ಹೌಹಾರಿದರು. ಮಹಾನಗರ ಪಾಲಿಕೆ ಆಯುಕ್ತರಿಗೆ ಕರೆ ಮಾಡಿ ಕ್ಯಾಂಟೀನ್‌ಗೆ ಸೂಕ್ತ ಸೌಲಭ್ಯ ಒದಗಿಸುವಂತೆ ತಾಕೀತು ಮಾಡಿದರು.
ನಗರದ ಕೃಷ್ಣ ಕೆಫೆ ಎದುರು ಡಿಡಿಪಿಐ ಕಚೇರಿ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್‌ಗೆ (Indira Canteen) ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರ ನೇತೃತ್ವದ ನಿಯೋಗ ಭೇಟಿ ನೀಡಿ ಪರಿಶೀಲಿಸಿತು.
ಏನೇನೆಲ್ಲ ಪರಿಶೀಲನೆ ನಡೆಸಿದರು?
ಇಂದಿರಾ ಕ್ಯಾಂಟೀನ್ ಆವರಣದಲ್ಲಿರುವ ಸ್ವಚ್ಛತೆ, ಉಪಕರಣಗಳು, ಪಾತ್ರೆಗಳು, ಬಾಗಿಲು, ಆಹಾರದ ಗುಣಮಟ್ಟವನ್ನು ಪರಿಶೀಲಿಸಲಾಯಿತು. ಈ ಸಂದರ್ಭ ಹಲವು ನ್ಯೂನತೆ ಕಂಡು ಬಂದಿದ್ದು, ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಗರಂ ಆದರು. ಗುತ್ತಿಗೆದಾರರು, ಹಿಂದಿನ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇಂದಿರಾ ಕ್ಯಾಂಟೀನ್‌ನ ಬೋರ್ಡ್, ಬಾಗಿಲುಗಳು ಮುರಿದು ಹೋಗಿವೆ. ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸರಿ ಇಲ್ಲದಿರುವುದು ಗಮನಕ್ಕೆ ಬಂತು.
ಆಹಾರದ ಗುಣಮಟ್ಟ ಪರಿಶೀಲನೆ
ಗುಣಮಟ್ಟ ಪರೀಕ್ಷೆಗಾಗಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್ ಮತ್ತು ಕೆಲವು ಕಾರ್ಯಕರ್ತರು ಕ್ಯಾಂಟೀನ್‌ನಲ್ಲಿ ಊಟ ಮಾಡಿದರು. ಮೊಸರನ್ನದಲ್ಲಿ ಮೊಸರಿನ ಬದಲು ನೀರು ಹಾಕಲಾಗಿದೆ ಎಂದು ಆರೋಪಿಸಿದರು.
ಪರಿಶೀಲನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಎಸ್.ಸುಂದರೇಶ್ ಪ್ರಮುಖ ವಿಚಾರಗಳನ್ನು ಪ್ರಸ್ತಾಪಿಸಿದರು.
ಇದನ್ನೂ ಓದಿ – ಶಿವಮೊಗ್ಗದ ಮೊದಲ ಇಂದಿರಾ ಕ್ಯಾಂಟೀನ್ ಈಗ ಹೇಗಿದೆ? ಊಟ, ತಿಂಡಿ ಸಿಕ್ತಿದ್ಯ? ಪ್ರತಿದಿನ ಎಷ್ಟು ಜನ ಬರ್ತಾರೆ?
ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಈ ವೇಳೆ ಇದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200