ಮಧು ಬಂಗಾರಪ್ಪಗೆ ಅದ್ಧೂರಿ ಸ್ವಾಗತ, ಬೈಕ್ ಜಾಥಾ, ಅಭಿನಂದನೆಗೆ ಸಿದ್ಧತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಕೆಪಿಸಿಸಿ ಹಿಂದುಳಿದ ವರ್ಗಗಳ ಸಮಿತಿಯ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಮಧು ಬಂಗಾರಪ್ಪ (MADHU BANGARAPPA) ಅವರನ್ನು ಸೆ.24 ರಂದು ಅದ್ಧೂರಿಯಾಗಿ ಸ್ವಾಗತಿಸಲಾಗುವುದು ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಹೇಳಿದರು.

Shimoga Nanjappa Hospital

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರ, ಮಧು ಬಂಗಾರಪ್ಪ ನೇಮಕವಾದ ನಂತರ ಪ್ರಥಮ ಬಾರಿಗೆ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಅವರನ್ನು ಸೆ.24ರ ಬೆಳಗ್ಗೆ 10.30ಕ್ಕೆ ಎಂ.ಆರ್.ಎಸ್. ವೃತ್ತದಿಂದ ಬೈಕ್ ಜಾಥಾ ಮೂಲಕ ಪಕ್ಷದ ಕಚೇರಿಗೆ ಕರೆತರಲಾಗುವುದು. ನಂತರ ಅವರನ್ನು ಅಭಿನಂದಿಸಲಾಗುವುದು ಎಂದರು.

ಮಧು ಬಂಗಾರಪ್ಪ (MADHU BANGARAPPA) ಅವರು ರಾಜ್ಯದ 224 ಕ್ಷೇತ್ರಗಳಿಗೆ ಪ್ರವಾಸ ಕೈಗೊಂಡಿದ್ದಾರೆ. ಪಕ್ಷದ ಸಂಘಟನೆಯ ಜೊತೆಗೆ ಚುನಾವಣಾ ತಯಾರಿಯನ್ನೂ ನಡೆಸಲಿದ್ದಾರೆ. ಅವರ ನೇಮಕ ಪಕ್ಷಕ್ಕೆ ಬಲ ತಂದಿದೆ ಎಂದರು.

ಜಿಲ್ಲಾ ವಕ್ತಾರ ರಮೇಶ್ ಶಂಕರಘಟ್ಟ ಮಾತನಾಡಿ, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಸರ್ಕಾರದಲ್ಲಿ ಹಿಂದುಳಿದ ವರ್ಗಗಳಿಗೆ ಯಾವುದೇ ಆದ್ಯತೆ ಸಿಕ್ಕಿಲ್ಲ. ಹಿಂದುಳಿದವರ ಸಂಘಟನೆಯ ಜೊತೆಗೆ ಕಾಂಗ್ರೆಸ್ ಅನ್ನು ಗೆಲ್ಲಿಸುವ ನಿಟ್ಟಿನಲ್ಲಿ ಮಧು ಬಂಗಾರಪ್ಪ ಹೊಸ ಹೆಜ್ಜೆ ಹಾಕಲಿದ್ದಾರೆ ಎಂದರು.

ಈ ಅಭಿನಂದನಾ ಕಾರ್ಯಕ್ರಮಕ್ಕೆ ಮಾಜಿ ಸಚಿವರಾದ ಹೆಚ್.ಎಂ. ರೇವಣ್ಣ, ಕಾಗೋಡು ತಿಮ್ಮಪ್ಪ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಜನಪ್ರತಿನಿಧಿಗಳು ಆಗಮಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಜಿ.ಡಿ. ಮಂಜುನಾಥ್, ವಿಜಯಕುಮಾರ್, ಎಸ್.ಪಿ. ಶೇಷಾದ್ರಿ, ಜಗನ್ನಾಥ್, ಬೊಮ್ಮನಕಟ್ಟೆ ಮಂಜುನಾಥ್, ಲಕ್ಷ್ಮಣ್, ಮಹೇಂದ್ರ, ರಘು, ಸುನಿಲ್, ವೆಂಕಟೇಶ್, ದೀಪಕ್ ಸಿಂಗ್, ಚಂದ್ರು ಮೊದಲಾದವರಿದ್ದರು.

ಕ್ಲಿಕ್ ಮಾಡಿ ಇದನ್ನೂ ಓದಿ ‘ಶಿವಮೊಗ್ಗ – ಭದ್ರಾವತಿ ಹೆದ್ದಾರಿ ಪರಿಸ್ಥಿತಿ 40 ಪರ್ಸೆಂಟ್ ಕಮಿಷನ್ ವ್ಯವಹಾರಕ್ಕೆ ಸಾಕ್ಷಿ’

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment