ಶಿವಮೊಗ್ಗದಲ್ಲಿ 620 ಮನೆಗಳ ಹಂಚಿಕೆ, ಸೌಲಭ್ಯವಿಲ್ಲದ್ದಕ್ಕೆ ಕಾಂಗ್ರೆಸ್ ಪಕ್ಷ ಗರಂ, ಮಾಜಿ ಎಂಎಲ್ಎ ಆರೋಪಗಳೇನು?

SHIVAMOGGA LIVE NEWS | 8 FEBRURARY 2023

SHIMOGA : ಚುನಾವಣೆ ಹಿನ್ನೆಲೆ ಮೂಲ ಸೌಲಭ್ಯ ಒದಗಿಸದೆ ತರಾತುರಿಯಲ್ಲಿ ಫಲಾನುಭವಿಗಳಿಗೆ ಆಶ್ರಯ ಮನೆಗಳನ್ನು (Ashraya House) ಹಂಚಿಕೆ ಮಾಡಲಾಗುತ್ತಿದೆ ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಆರೋಪಿಸಿದರು.➤ ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

KB-Prasanna-Kumar-about-Ashraya-houses.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಬಿ.ಪ್ರಸನ್ನ ಕುಮಾರ್ ಅವರು, ಕಾಮಗಾರಿ ಪೂರ್ಣಗೊಂಡ ಮೇಲೆ ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕು. ಆದರೆ ಚುನಾವಣೆ ಹಿನ್ನೆಲೆ ತರಾತುರಿಯಲ್ಲಿ ಫಲಾನುಭವಿಗಳಿಗೆ ಮನೆಗಳ ಹಂಚಿಕೆ ಮಾಡಲಾಗುತ್ತಿದೆ. ಇದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕರೆಯಿಸುತ್ತಿದ್ದಾರೆ ಎಂದರು.

ಮನೆಗಳಿಗೆ ಮೂಲ ಸೌಕರ್ಯವಿಲ್ಲ

ಗೋಪಿಶೆಟ್ಟಿಕೊಪ್ಪ ಮತ್ತು ಗೋವಿಂದಾಪುರದಲ್ಲಿ ಆಶ್ರಯ ಮನೆಗಳನ್ನು (Ashraya House) ನಿರ್ಮಿಸಲಾಗುತ್ತಿದೆ. ಮೆಸ್ಕಾಂಗೆ 9 ಕೋಟಿ ರೂ. ಠೇವಣಿ ಪಾವಿತಿಸದೆ ವಿದ್ಯುತ್ ಸಂಪರ್ಕ ನೀಡುವುದಿಲ್ಲ. ಈಗ 20 ಲಕ್ಷ ರೂ. ಮಾತ್ರ ಠೇವಣಿ ನೀಡಿ 28 ದಿನಗಳ ಮಟ್ಟಿಗೆ ಆಶ್ರಯ ಮನೆಗಳಿಗೆ ಸಂಪರ್ಕ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿದರು.

ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಬದಲು ಬೋರ್ ಕೊರೆಸಿದ್ದಾರೆ. ತುಂಗಾ ನದಿ ನೀರು ಒದಗಿಸುವ ಬದಲು ಸ್ಥಳೀಯ ಗ್ರಾಮ ಪಂಚಾಯಿತಿಯೆ ನೀರಿನ ವ್ಯವಸ್ಥೆ ಮಾಡಬೇಕು ಎಂದು ಈಶ್ವರಪ್ಪ ಅವರು ಹಾರಿಕೆ ಉತ್ತರ ನೀಡಿದ್ದಾರೆ. ಮೂಲ ಸೌಲಭ್ಯ ಒದಗಿಸದೆ ಫಲಾನುಭವಿಗಳಿಗೆ ಮನೆಗಳ ಹಸ್ತಾಂತರ ಮಾಡಬಾರದು ಎಂದು ಕೆ.ಬಿ.ಪ್ರಸನ್ನ ಕುಮಾರ್ ಆಗ್ರಹಿಸಿದರು.

 ಲಾಟರಿ ಮೂಲಕ ಫಲಾನುಭವಿಗಳ ಆಯ್ಕೆ 
ರಾಜೀವ್ Ashraya House Lotteryಗಾಂಧಿ ವಸತಿ ನಿಗಮ, ಶಿವಮೊಗ್ಗ ಮಹಾನಗರ ಪಾಲಿಕೆ, ಆಶ್ರಯ ಯೋಜನೆ ಅಡಿ ನಿರ್ಮಾಣವಾಗಿರುವ ಅಶ್ರಯ ಮನೆಗಳ ಮೊದಲ ಹಂತದ ಮನೆಗಳ ಹಂಚಿಕೆಗೆ ಲಾಟರಿ ಮೂಲಕ ಫಲಾನುಭವಿಗಳ ಆಯ್ಕೆ ನಡೆಯಿತು. ಶಾಸಕ ಕೆ.ಎಸ್.ಈಶ್ವರಪ್ಪ ಅವರು ಗೋವಿಂದಾಪುರದಲ್ಲಿ ಲಾಟರಿ ಮೂಲಕ ಫಲಾನುಭವಿಗಳ ಆಯ್ಕೆಗೆ ಚಾಲನೆ ನೀಡಿದ್ದರು. 620 ಫಲಾನುಭವಿಗಳನ್ನು ಲಾಟರಿ ಮೂಲಕ ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫೆ.8ರಂದು ಹಕ್ಕುಪತ್ರ ನೀಡಲಿದ್ದಾರೆ.

ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಆರ್.ಸಿ.ನಾಯ್ಕ್, ಸದಸ್ಯ ಬಿ.ಎ.ರಮೇಶ್ ಹೆಗ್ಡೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಸಿಂಗ್, ಪ್ರಮುಖರಾದ ಶಿವಾನಂದ, ಶ್ಯಾಮಸುಂದರ್ ಸೇರಿದಂತೆ ಹಲವರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಇದನ್ನೂ ಓದಿ – ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಎಲ್ಲಿಗೆಲ್ಲ ಭೇಟಿ ನೀಡಲಿದ್ದಾರೆ?

Leave a Comment