ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 22 DECEMBER 2022
[su_highlight background=”#cd0003″ color=”#ffffff”]ಸುದ್ದಿಯ ಹಿನ್ನೆಲೆ[/su_highlight]
[su_note note_color=”#fff0c8″ text_color=”#000000″ radius=”0″]ಬ್ಯಾರೀಸ್ ಸಂಸ್ಥೆಯು ಶಿವಮೊಗ್ಗದ ಸಿಟಿ ಸೆಂಟರ್ ಮಾಲ್ (city centre mall) ನಿರ್ವಹಣೆ ಮಾಡುತ್ತಿದೆ. ಗುತ್ತಿಗೆ ಅವಧಿಯನ್ನು 99 ವರ್ಷಕ್ಕೆ ವಿಸ್ತರಿಸುವಂತೆ ಸಂಸ್ಥೆಯು ಮನವಿ ಮಾಡಿತ್ತು. ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭೆಯಲ್ಲಿ ಈ ಮನವಿಯನ್ನು ತಿರಸ್ಕರಿಸಲಾಗಿತ್ತು. ಹಾಗಿದ್ದು ಮೇಯರ್ ಸೇರಿದಂತೆ ಯಾರ ಒಪ್ಪಿಗೆಯು ಇಲ್ಲಿದೆ ಪಾಲಿಕೆ ಸಾಮಾನ್ಯ ಸಭೆಯ ಅಜೆಂಡಾದಲ್ಲಿ ವಿಷಯ ಸೇರ್ಪಡೆಯಾಗಿತ್ತು. ಈ ಕುರಿತು ಪರಿಶೀಲಿಸಲು ಸಮಿತಿ ರಚಿಸಲಾಗಿತ್ತು. ಸಮಿತಿಯ ವರದಿಯ ಈಚೆಗೆ ಸಮಾನ್ಯ ಸಭೆಯಲ್ಲಿ ಮಂಡಿಸಲಾಗಿದೆ.[/su_note]
[su_divider text=”www.shivamoggalive.com” divider_color=”#000000″ link_color=”#000000″]
ಶಿವಮೊಗ್ಗ : ಸಿಟಿ ಸೆಂಟರ್ ಮಾಲ್ ಗುತ್ತಿಗೆ ಅವಧಿ ವಿಸ್ತರಣೆ ವಿಷಯ ಪಾಲಿಕೆ ಸಾಮಾನ್ಯ ಸಭೆಯ ಅಜೆಂಡಾದಲ್ಲಿ ಸೇರ್ಪಡೆಯಾಗಲು ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ ಅವರು ಕಾರಣ ಎಂಬುದು ತನಿಖಾ ವರದಿಯಲ್ಲಿದೆ. ಅದ್ದರಿಂದ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಜೆಂಡಾದಲ್ಲಿ ವಿಷಯ ಸೇರ್ಪಡೆಯಾಗಿದ್ದು ಹೇಗೆ ಎಂಬುದನ್ನು ತನಿಖೆ ಮಾಡಲು ಸಮಿತಿ ರಚಿಸಲಾಗಿತ್ತು. ಕಾಂಗ್ರೆಸ್ ಪಕ್ಷದ ಪ್ರತಿಭಟನೆಯ ಬಳಿಕ ಸಮಿತಿಯ ವರದಿಯನ್ನು ಸಭೆಯಲ್ಲಿ ಮಂಡಿಸಲಾಗಿದೆ. ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ ಅವರು ಫೋನ್ ಮೂಲಕ ಅಧಿಕಾರಿಗೆ ವಿಷಯ ಸೇರಿಸಬೇಕು ಎಂದು ಸೂಚಿಸಿರುವುದು ವರದಿಯಿಂದ ಬಹಿರಂಗಗೊಂಡಿದೆ ಎಂದು ತಿಳಿಸಿದರು.
ಕೆಲವು ದಿನದ ಹಿಂದೆ ಸುದ್ದಿಗೋಷ್ಠಿ ನಡೆಸಿದ್ದ ಚನ್ನಬಸಪ್ಪ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ತಪ್ಪು ಹೊರೆಸುವ ಪ್ರಯತ್ನ ಮಾಡಿದ್ದಾರೆ. 2015ರಲ್ಲೇ ಮಾಲ್ (city centre mall) ಲೀಸ್ ಅವಧಿಯನ್ನು 60 ವರ್ಷಕ್ಕೆ ವಿಸ್ತರಿಸಲು ಯತ್ನಿಸಲಾಗಿತ್ತು ಎಂದು ಹೇಳಿಕೆ ನೀಡಿದ್ದಾರೆ. ತಮ್ಮ ತಪ್ಪು ಮರೆಮಾಚಲು ಕಾಂಗ್ರೆಸ್ ಪಕ್ಷದ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ರೇಖಾ ರಂಗನಾಥ್ ಆಪಾದಿಸಿದರು.

ಸ್ಥಾಯಿ ಸಮಿತಿ ಸಭೆಯಲ್ಲಿ ತಿರಸ್ಕರಿಸಲ್ಪಟ್ಟ ವಿಷಯ ಸಾಮಾನ್ಯ ಸಭೆಯ ಅಜೆಂಡಾದಲ್ಲಿ ಸೇರ್ಪಡೆಯಾಗಲು ಕಿಕ್ ಬ್ಯಾಕ್ ಪಡೆದಿದ್ದಾರೆ ಎಂಬ ಆರೋಪವಿದೆ. ಇದು ಕೋಟ್ಯಂತರ ರುಪಾಯಿಯ ಹಗರಣವಾಗಿದೆ ಎಂದು ಆರೋಪಿಸಿದರು.
ಇದನ್ನೂ ಓದಿ – ಶಿವಮೊಗ್ಗ ರಿಂಗ್ ರೋಡ್, ಜಿಲ್ಲೆಯ ಹಲವು ಹೆದ್ದಾರಿ ಅಭಿವೃದ್ಧಿಗೆ ಒಪ್ಪಿಗೆ, ಯಾವೆಲ್ಲ ರಸ್ತೆ ಅಭಿವೃದ್ಧಿಯಾಗುತ್ತೆ?
ಪಾಲಿಕೆಯ ಕಾಂಗ್ರೆಸ್ ಸದಸ್ಯರಾದ ರಮೇಶ್ ಹೆಗ್ಡೆ, ಹೆಚ್.ಸಿ.ಯೋಗೇಶ್, ಆರ್.ಸಿ.ನಾಯ್ಕ್, ಯಮುನಾ ರಂಗೇಗೌಡ ಸುದ್ದಿಗೋಷ್ಠಿಯಲ್ಲಿದ್ದರು.
[su_animate type=”bounceInUp”][su_button url=”https://chat.whatsapp.com/KChu2C1bGTM2v9HmZlfIkS” target=”blank” style=”glass” background=”#0b00a1″ color=”#ffffff” size=”6″ wide=”yes” radius=”10″ icon=”https://shivamoggalive.com/wp-content/uploads/2022/11/Whatspp-Logo.png”]CLICK & JOIN – SHIVAMOGGA LIVE COMMUNITY[/su_button][/su_animate]

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















