ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಆಗಸ್ಟ್ 2020
ಭಾರೀ ಮಳೆಗೆ ಮನೆ ಕುಸಿದ ಪ್ರದೇಶಗಳಿಗೆ ಮಹಾನಗರ ಪಾಲಿಕೆ ವಿರೋಧ ಪಕ್ಷ ನಾಯಕ ಹೆಚ್.ಸಿ.ಯೋಗೇಶ್ ನೇತೃತ್ವದಲ್ಲಿ ಪಾಲಿಕೆಯ ಕಾಂಗ್ರೆಸ್ ಸದಸ್ಯರುಗಳು ಹಾಗೂ ಕಾಂಗ್ರೆಸ್ ಮುಖಂಡರುಗಳು ಭೇಟಿ ನೀಡಿ ಸಾಂತ್ವನ ಹೇಳಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇತ್ತೀಚೆಗೆ ನಗರದಲ್ಲಿ ಸುರಿದ ಮಳೆಗೆ ಟಿಪ್ಪು ನಗರ, ಜೆಪಿ ನಗರ, ಅಶೋಕ ನಗರ, ರಾಜೀವ್ ಗಾಂಧಿ ಬಡಾವಣೆ, ಚೌಡೇಶ್ವರಿ ಕಾಲೋನಿಯಲ್ಲಿ ಹತ್ತಾರು ಮನೆಗಳು ಮಳೆಯ ಹೊಡೆತಕ್ಕೆ ನೆಲಸಮವಾಗಿವೆ. ಮನೆ ಕಳೆದುಕೊಂಡ ಕುಟುಂಬಗಳನ್ನು ಭೇಟಿಯಾಗಿ ಸಾಂತ್ವನ ಹೇಳಿ, ಸ್ಥಳ ಪರಿಶೀಲನೆ ನಡೆಸಿದರು. ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಲು ಸರ್ಕಾರವನ್ನು ಒತ್ತಾಯಿಸಿದರು.
ಈ ವೇಳೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್, ಸೂಡಾ ಮಾಜಿ ಅಧ್ಯಕ್ಷ ಎನ್.ರಮೇಶ್, ಉತ್ತರ ಬ್ಲಾಕ್ ಅಧ್ಯಕ್ಷ ನಾಗರಾಜ್, ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾಶಿ ವಿಶ್ವನಾಥ್, ಪಾಲಿಕೆ ಸದಸ್ಯರಾದ ಶಮೀರ್ ಖಾನ್, ಮಂಜುಳಾ ಶಿವಣ್ಣ, ರೇಖಾ ರಂಗನಾಥ್, ಯಮುನಾ ರಂಗೇಗೌಡ, ಮೆಹಕ್ ಷರೀಫ್ ಸೇರಿದಂತೆ ಹಲವರು ಇದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]