ಶಿವಮೊಗ್ಗ ಲೈವ್.ಕಾಂ | SHIMOGA NEWS | 12 MARCH 2021
ಶಿವಮೊಗ್ಗ ಚಲೋ ಹೋರಾಟದಲ್ಲಿ ದೊಡ್ಡ ಸಂಖ್ಯೆಯ ಮಹಿಳೆಯರು ಭಾಗವಹಿಸುತ್ತಿದ್ದಾರೆ. ಭದ್ರಾವತಿ ಶಾಸಕರ ಮೇಲೆ ಆಗಿರುವ ದೌರ್ಜನ್ಯ ಖಂಡಿಸಿ ಹೋರಾಟ ನಡೆಸಲಾಗುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪುಷ್ಪಾ ಅಮರನಾಥ್, ಶಿವಮೊಗ್ಗ ಚಲೋ ಕಾರ್ಯಕ್ರಮ ಶಿವಮೊಗ್ಗ, ಭದ್ರಾವತಿಗೆ ಸೀಮಿತ ಅಲ್ಲ. ಸಂವಿಧಾನದ ಆಶಯ ಉಳಿವಿಗಾಗಿ ಹೋರಾಟ ನಡೆಸಲಾಗ್ತಿದೆ ಎಂದರು.
ಬಿಜೆಪಿಯವರು ತಮಗೆ ಇಷ್ಟ ಬಂದ ಹಾಗೆ ಸರ್ಕಾರ ನಡೆಸಲು ಅವಕಾಶವಿಲ್ಲ. ಇದು ಪ್ರಜಾಪ್ರಭುತ್ವ ವ್ಯವಸ್ಥೆ. ಸಂವಿಧಾನದ ಆಶಯ ಕಾಪಾಡಿಕೊಳ್ಳಲು ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು.
ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಅನಿತಾ ಕುಮಾರಿ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯ್ ಕುಮಾರ್, ಕಾರ್ಪೊರೇಟರ್ ಯಮುನಾ ರಂಗೇಗಗೌಡ, ವಿಜಯಲಕ್ಷ್ಮಿ ಪಾಟೀಲ್ ಸೇರಿದಂತೆ ಹಲವರು ಇದ್ದರು
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]