ಶಿವಮೊಗ್ಗ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಬಂದ ಕಾಂಗ್ರೆಸ್ ಕಾರ್ಯಕರ್ತರು ಅರೆಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | SHIMOGA | 17 ಜೂನ್ 2022

ಜಾರಿ ನಿರ್ದೇಶನಾಲಯವನ್ನು (ಇ.ಡಿ) ರಾಜಕೀಯ ದುರುದ್ದೇಶಕ್ಕೆ ಬಳಕೆ ಮಾಡಿಕೊಳ್ಳುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಯಿತು.

Shimoga Nanjappa Hospital

ಕಾಂಗ್ರೆಸ್ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಲಾಯಿತು. ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಒಳ ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿತ್ತು.

ಡಿಸಿ ಕಚೇರಿ ಬಳಿ ಹೈಡ್ರಾಮಾ

ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಪ್ರವೇಶಿಸದಂತೆ ಪೊಲೀಸರು ತಡೆದರು. ಈ ವೇಳೆ ಭಾರಿ ಹೈಡ್ರಾಮಾ ನಡೆಯಿತು. ನೂಕಾಟ, ತಳ್ಳಾಟ ಉಂಟಾಯಿತು. ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಮಾಜಿ ಶಾಸಕ ಪ್ರಸನ್ನ ಕುಮಾರ್, ಹೆಚ್.ಸಿ.ಯೋಗೇಶ್ ಸೇರಿದಂತೆ ಹಲವರನ್ನು ಬಂಧಿಸಲಾಯಿತು.

ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ಬಸ್’ಗೆ ಅಡ್ಡಲಾಗಿ ಕುಳಿತು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಇದರಿಂದಾಗಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

Congress Protest in Shimoga

ಇ.ಡಿ ದುರ್ಬಳಕೆ ವಿರುದ್ಧ ಆಕ್ರೋಶ

ಕೇಂದ್ರ ಸರ್ಕಾರ ರಾಜಕೀಯ ಕಾರಣಕ್ಕಾಗಿ ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ವಿನಾಕಾರಣ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಇದನ್ನು ಖಂಡಿಸಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಲು ಅವಕಾಶ ನೀಡದೆ ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳಲಾಗುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳಿಂದ ದಾಳಿ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 17, 2022

Leave a Comment