ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕ್ರೆಡಿಟ್ ಕಾರ್ಡಿನಿಂದ (Credit Card) ಅನಧಿಕೃತವಾಗಿ ಕಡಿತ ಮಾಡಿದ ಹಣವನ್ನು ಗ್ರಾಹಕರಿಗೆ ಮರುಪಾವತಿಸದ ಪ್ರಕರಣದಲ್ಲಿ ಸೇವಾ ನ್ಯೂನತೆ ಎಸಗಿರುವುದು ಸಾಬೀತಾದ ಹಿನ್ನೆಲೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಬೆಂಗಳೂರಿನ ಎಸ್‌ಬಿಐ ಕಾರ್ಡ್ಸ್ (SBI Cards) ಮತ್ತು ಪೇಮೆಂಟ್ ಸರ್ವೀಸ್, ಕಾರ್ಡ್‌ದಾರ ಮಂಜುನಾಥ್ ಅವರಿಗೆ ಹಣ ಮರುಪಾವತಿಸುವಂತೆ ಆದೇಶ ನೀಡಿದೆ.
ತಿಲಕ್‌ನಗರದ ವಾಸಿ ಮಂಜುನಾಥ್ ಸೇವಾ ನ್ಯೂನತೆ ಕುರಿತು ಆಯೋಗಕ್ಕೆ ದೂರು ನೀಡಿದ್ದರು. ತಿಲಕ್ ನಗರದ ಎಸ್‌ಬಿಐ ಬ್ಯಾಂಕ್‌ನಿಂದ ನೀಡಿದ್ದ ಕ್ರೆಡಿಟ್ ಕಾರ್ಡನ್ನು ಬಳಸುತ್ತಾ, ವಾರ್ಷಿಕ ಶುಲ್ಕ ಪಾವತಿಸುತ್ತಿದ್ದರು. ಆದರೂ ಮೂರು ಬಾರಿ ಕ್ರೆಡಿಟ್ ಕಾರ್ಡ್‌ನಿಂದ ಹಣ ಕಡಿತಗೊಳಿಸಲಾಗಿತ್ತು .

ಸಿವಿವಿ ಹಾಗೂ ಒಟಿಪಿ ಇಲ್ಲದೆ ವ್ಯವಹಾರ ನಡೆಸಿದ ಬಗ್ಗೆ ಮಂಜುನಾಥ್ ಇ-ಮೇಲ್ ಮೂಲಕ ದೂರು ನೀಡಿದ್ದರು. ಜತೆಗೆ ಆನ್‌ಲೈನ್‌ನಲ್ಲಿ (Online) ಪೊಲೀಸ್ ಠಾಣೆಗೂ ದೂರು ನೀಡಿದ್ದರು. ಕ್ರೆಡಿಟ್ ಕಾರ್ಡ್‌ನಿಂದ ಅನಧಿಕೃತವಾಗಿ ಕಡಿತವಾದ ಮೊತ್ತಗಳ ಬಗ್ಗೆ ಆರ್‌ಬಿಐ ಮಾನದಂಡಗಳನ್ನು ಪಾಲಿಸಿಲ್ಲ. ಸೂಕ್ತ ತನಿಖೆ ನಡೆಸದೆ, ಕಡಿತ ಮಾಡಿದ ಹಣವನ್ನು ಕ್ರೆಡಿಟ್ ಕಾರ್ಡ್‌ಗೆ ಮರು ಜಮೆ ಮಾಡದೆ ಸೇವಾನ್ಯೂನತೆ ಎಸಗಿದ್ದಾರೆ ಎಂದು ಮಂಜುನಾಥ್ ದೂರು ನೀಡಿದ್ದರು.
ಇದನ್ನೂ ಓದಿ » ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
ಮಂಜುನಾಥ್ ಸಲ್ಲಿಸಿದ ದಾಖಲೆಗಳನ್ನು ಪರಿಶೀಲಿಸಿದ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಸೇವಾನ್ಯೂನತೆ ನಡೆದಿದೆ ಎಂದು ತೀರ್ಮಾನಿಸಿ, ಎಸ್‌ಬಿಐ ಕ್ರೆಡಿಟ್ ಕಾರ್ಡ್ಸ್ ಮತ್ತು ಪೇಮೆಂಟ್ಸ್ ಸಂಸ್ಥೆ ಮಂಜುನಾಥ್ ಅವರಿಗೆ 45 ದಿನಗಳ ಒಳಗೆ ಕಟಾವಣೆಯಾದ ಹಣ ಮರುಪಾವತಿಸುವಂತೆ ಆಯೋಗದ ಅಧ್ಯಕ್ಷ ಶಿವಣ್ಣ ಮತ್ತು ಸದಸ್ಯ ಬಿ.ಡಿ.ಯೋಗಾನಂದ ಭಾಂಡ್ಯ ಪೀಠ ಆದೇಶ ನೀಡಿದೆ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















