ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಮೇ 2020
ಇವತ್ತು ಪತ್ತೆಯಾಗಿರುವ ಆರು ಕ್ವಾರಂಟೈನ್ ಪ್ರಕರಣಗಳ ಪೈಕಿ ಐದು ಕೇಸ್ ಶಿವಮೊಗ್ಗ ನಗರಕ್ಕೆ ಸಂಬಂಧಿಸಿದೆ. ಈ ಹಿನ್ನೆಯಲ್ಲಿ ಈ ಐವರು ಇದ್ದ ಮನೆಯ ಸುತ್ತಲು ಕಂಟೈನ್ಮೆಂಟ್ ಜೋನ್ ಎಂದು ಘೋಷಣೆ ಮಾಡಲಾಗಿದೆ. ಜನ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಒಂದೇ ಕುಟುಂಬದ ಐವರು
ತಮಿಳುನಾಡಿನಿಂದ ಶಿವಮೊಗ್ಗಕ್ಕೆ ಬಂದಿರುವ ಐವರು ಒಂದೇ ಕುಟುಂಬದವರು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಅಜ್ಜ, ಅಜ್ಜಿ, ಇಬ್ಬರು ಮಕ್ಕಳು ಮತ್ತು ಅವರ ತಾಯಿ ಎಂದು ಜಿಲ್ಲಾಧಿಕಾರಿ ಸ್ಪಷ್ಪಡಿಸಿದ್ದಾರೆ.
ಎಲ್ಲರು ಮನೆಯಲ್ಲೇ ಇದ್ದರು
ತಮಿಳುನಾಡಿನಿಂದ ಬಂದಿದ್ದ ಕುಟುಂಬ ಮನೆಗೆ ಹೋಗಿದ್ದರು. ವಿಚಾರ ತಿಳಿಯುತ್ತಿದ್ದಂತೆ ಕೋವಿಡ್ ತಪಾಸಣೆಗೆ ಒಳಪಡಿಸಲಾಗಿತ್ತು. ಮೇ 18ರಂದು ಗಂಟಲು ದ್ರವ ಪರೀಕ್ಷೆ ನಡೆಸಲಾಗಿದೆ.
ಕುಟುಂಬಕ್ಕೆ ಪಾಸಿಟಿವ್, ಸಿಟಿ ಗಢಗಢ
ಪಾಸಿಟಿವ್ ಬಂದಿರುವ ವಿಚಾರ ತಿಳಿಯುತ್ತಿದ್ದಂತೆ ಈ ಕುಟುಂಬ ವಾಸಿಸುತ್ತಿದ್ದ ಏರಿಯಾದ ಜನರು ಆತಂಕಕ್ಕೀಡಾಗಿದ್ದಾರೆ. ಮನೆಯಿಂದ ಹೊರ ಬರಲು ಭಯಗೊಂಡಿದ್ದಾರೆ. ಮತ್ತೊಂದೆಡೆ ಈ ಏರಿಯಾವನ್ನು ಕಂಟೈನ್ಮೆಂಟ್ ಜೋನ್ ಎಂದು ಜಿಲ್ಲಾಡಳಿತ ಘೋಷಣೆ ಮಾಡಿದೆ.
ಈ ಕುಟುಂಬ ಶಿವಮೊಗ್ಗದ ತುಂಗಾ ನಗರದಲ್ಲಿ ವಾಸವಾಗಿತ್ತು. ಈ ಹಿನ್ನೆಲೆಯಲ್ಲಿ ತುಂಗಾ ನಗರದಲ್ಲಿ ಕಂಟೈನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ಮನೆಯಿದ್ದ ರಸ್ತೆಗೆ ಬ್ಯಾರಿಕೇಡ್ ಹಾಕಲಾಗಿದೆ. ಜನರು ಮನೆಯಿಂದ ಹೊರ ಬಾರದಂತೆ ಸೂಚಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]